ದಾವಣಗೆರೆ: ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಯಾರು ಬೇಕಾದ್ರೂ ಬರಬಹುದು ಎಂದು ಮಾಜಿ ಸಚಿವ ರೇಣುಕಾಚಾರ್ಯ (M.P Renukacharya) ಹೇಳಿದ್ದಾರೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ್ದಾರೆ.
ದಾವಣಗೆರೆಯಲ್ಲಿ (Davanagere) ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಡಿಕೆಶಿ ಬಿಜೆಪಿಗೆ ಬರುತ್ತಾರೆ ಎಂಬ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಯಾರು ಬೇಕಾದರೂ ಬರಬಹುದು. ಆದರೆ ಕಾಂಗ್ರೆಸ್ ಸಂಸ್ಕೃತಿ, ಸಿದ್ಧಾಂತ ಇಲ್ಲಿ ಒಗ್ಗಲ್ಲ. ರಾಜ್ಯ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡಿದ್ರೆ ಅದಕ್ಕೆ ಒಪ್ಪುತ್ತೇವೆ. ಡಿಕೆಶಿ ಆರ್‌ಎಸ್‌ಎಸ್ (RSS) ಗೀತೆ ಹಾಡಿ ಮಾರನೇ ದಿನವೇ ಉಲ್ಟಾ ಹೊಡೆದರು. ಇದನ್ನು ಬಿಜೆಪಿ ಪಕ್ಷದ ತತ್ವ ಸಿದ್ದಾಂತ ಒಪ್ಪೋದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪವರ್ ಶೇರಿಂಗ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸುಳ್ಳು ಭರವಸೆ ಕೊಟ್ಟು ಬಂದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಶಾಸಕರು ಸಚಿವರು ಯಾರ ಮನೆಗೆ ಭೇಟಿ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಇಲ್ಲ ಲೋ ಕಮಾಂಡ್ ಆಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ಟ್ವಿಟ್ ವಾರ್ ಆರಂಭವಾಗಿದೆ. ಇವೆರಡರ ನಡುವೆ ಪರಮೇಶ್ವರ್ ದಲಿತ ಮುಖ್ಯಮಂತ್ರಿ ಆಗಬೇಕು ಎನ್ನುತ್ತಾರೆ. ರಾಜ್ಯದಲ್ಲಿ ರೈತರು ಬೀದಿಪಾಲಾಗಿ ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ, ಬೆಂಗಳೂರಿನಲ್ಲಿ ಕುದುರೆ ವ್ಯಾಪಾರ ಆರಂಭವಾಗಿದೆ. ಇವರ ಗೊಂದಲದ ನಡುವೆ ಜಾತಿ ಜಾತಿಗಳ ನಡುವೆ ವಾಗ್ವಾದ ಗಲಾಟೆಗಳು ನಡೆಯುತ್ತಿವೆ. ಹಲವು ಸಮಾಜದ ಮುಖಂಡರು ನಮ್ಮ ಸಮಾಜದ ಮುಖಂಡ ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಜಾತಿ ಸಂಘರ್ಷ ಆಗುತ್ತೆ.
ಬಿಜೆಪಿ ಅಧ್ಯಕ್ಷರು ನಾಯಕರು ರೈತರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಕಬ್ಬು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಕೊಟ್ಟು ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು. ರೈತರ ಸಂಕಷ್ಟಕ್ಕೆ ಸ್ಪಂದಿಸಿ ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

