ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ (kannada anchor aparna) ಅವರಿಂದು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.
ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Advertisement
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/fZs9L6m42Q
— Siddaramaiah (@siddaramaiah) July 11, 2024
Advertisement
ಬಸವರಾಜ ಬೊಮ್ಮಾಯಿ:
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
Advertisement
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ… pic.twitter.com/ZC3LpsepNO
— Basavaraj S Bommai (@BSBommai) July 11, 2024
Advertisement
ಸಂತೋಷ್ ಲಾಡ್:
ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಕಾಲಿಕ ನಿಧನ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ.
ಜಮೀರ್ ಅಹಮದ್ ಖಾನ್:
ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ಅವರ ಅಗಲಿಕೆ ಕಿರುತೆರೆ ಹಾಗೂ ಚಲನ ಚಿತ್ರ ರಂಗಕ್ಕೆ ಅಪಾರ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ… pic.twitter.com/EI2DBga1DW
— DK Shivakumar (@DKShivakumar) July 11, 2024
ಡಿಕೆ ಶಿವಕುಮಾರ್:
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು.