ಬೆಂಗಳೂರು: ಆಕೆಯ ಧ್ವನಿಯಲ್ಲಿ ಹೊಮ್ಮುತ್ತಿದ್ದ ಕನ್ನಡ ನುಡಿಗಳು ಎಂಥವರನ್ನೂ ತಲೆದೂಗುವಂತೆ ಮಾಡುತ್ತಿತ್ತು, ಭಾಷೆಗೆ ತಕ್ಕ ಭಾವನೆ, ಅಚ್ಚ ಕನ್ನಡವನ್ನು ಸ್ವಚ್ಛವಾಗಿ ಮಾತನಾಡುವ ಶೈಲಿ, ಪದಕ್ಕೆ ಪದ ಸೇರಿಸಿ ಅಕ್ಷರಗಳಿಗೂ ಭಾವ ತುಂಬುತ್ತಿದ್ದ ದನಿ ಇಂದು ಚಿರಮೌನಕ್ಕೆ ಜಾರಿದೆ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಕನ್ನಡಿಗರ ಮನಗೆದ್ದಿದ್ದ ಅಪರ್ಣಾ ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ.
ಹೌದು. ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ (Kannada Anchor Aparna) ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.
ನಮ್ಮ ಮೆಟ್ರೋಗೆ ದನಿಯಾಗಿದ್ದ ಅಪರ್ಣಾ:
ಯಶಸ್ವಿ ನಿರೂಪಕಿಯಾಗಿ 3 ದಶಕಗಳ ವರೆಗೆ ಕನ್ನಡ ಸೇವೆ ಸಲ್ಲಿಸಿದ ಅಪರ್ಣಾ, 2014 ರಲ್ಲಿ ಬೆಂಗಳೂರಿನ ʻನಮ್ಮ ಮೆಟ್ರೋʼದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ, ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು. ಇದನ್ನೂ ಓದಿ: ಕಳಚಿತು ಅಚ್ಚ ಕನ್ನಡದ ಕೊಂಡಿ – ಸಿದ್ದರಾಮಯ್ಯ, ಬೊಮ್ಮಾಯಿ ಸೇರಿ ಗಣ್ಯಮಾನ್ಯರಿಂದ ಸಂತಾಪ!
ಬಾಡಿದ ಮಸಣದ ಹೂವು:
1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ʻಸಣದ ಹೂವುʼಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: Breaking: ಮಾತು ನಿಲ್ಲಿಸಿ ಚಿರನಿದ್ರೆಗೆ ಜಾರಿದ ಅಪರ್ಣಾ!
1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ. ಇದನ್ನೂ ಓದಿ: ಜು.16ರಂದು ಸಿಗಲಿದೆ ’ಮ್ಯಾಕ್ಸ್’ ಚಿತ್ರದ ಅಪ್‌ಡೇಟ್- ಕಿಚ್ಚ ಕೊಟ್ರು ಗುಡ್ ನ್ಯೂಸ್