ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಹಾಗೂ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸಹೋದರನ ಪತ್ನಿ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದರು.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮೂವರು ಹಿಂದುಳಿದ ಸಮುದಾಯದ ನಾಯಕರು ಸೇರಿದಂತೆ ಅನೇಕ ಮುಖಂಡರು ಈಚೆಗೆ ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ ಸೇರಿದ್ದಾರೆ. ಈ ಬೆಳವಣಿಗೆ ಮಧ್ಯೆ ಸಮಾಜವಾದಿ ಪಕ್ಷದ ನಾಯಕರ ಮನೆಯ ಮಹಿಳೆಯೇ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ
ಬಿಜೆಪಿ ಮಾಜಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರ್ಮ ಸಿಂಗ್ ಸೈನಿ, ದರಾ ಸಿಂಗ್ ಚೌಹಾಣ್ ಅವರು ಈಚೆಗೆ ಪಕ್ಷ ತೊರೆದು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಸೇರಿದರು. ಇದರ ಮಧ್ಯೆಯೇ ಅಖಿಲೇಶ್ ಯಾದವ್ ನಾದಿನಿ ಅಪರ್ಣಾ ಯಾದವ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಅದರಂತೆಯೇ ಇಂದು ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಅಪರ್ಣಾ ಯಾದವ್ 2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಿತಾ ಬಹುಗುಣ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಅದಾದ ಬಳಿಕ ಬಿಜೆಪಿ ಪಕ್ಷದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಪರ್ಣಾ ಯಾದವ್ ಒಲವು ಹೊಂದಿದ್ದರು. ಕೆಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದರು. ಇದನ್ನೂ ಓದಿ: ಕೇಸ್ ತಾರತಮ್ಯಕ್ಕೆ ಕಾಂಗ್ರೆಸ್ ಚಾಟಿ ಬಳಿಕ ಎಚ್ಚೆತ್ತ ಸರ್ಕಾರ- ಹೈಕಮಾಂಡ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ