BelgaumDistrictsKarnatakaLatestMain Post

ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎನ್.ಜಯರಾಮ್ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ನ್ಯಾಯಾಲಯದ ಸೂಚನೆಯ ಮೆರೆಗೆ ಖಾಸಗಿ ಮಾರುಕಟ್ಟೆ ನಿರ್ಮಾಣ ಮಾಡಲು ಸಹಕಾರ ನೀಡಿದ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದಗೌಡ ಮೋದಗಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಮಾರುಕಟ್ಟೆ ನಿರ್ಮಾಣ ಮಾಡಲು ಸಹಕಾರ ನೀಡಿದ ಅಂದಿನ ಜಿಲ್ಲಾಧಿಕಾರಿ ಎನ್.ಜಯರಾಮ್, ಬುಡಾ ಆಯುಕ್ತ, ತಹಶೀಲ್ದಾರ ಪ್ರೀತಂ ನಸಲಾಪುರೆ, ಮೇಲೆ ಏ.26ರಂದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಸರ್ಕಾರದ ಸಂಸ್ಥೆಯಾದ ಎಪಿಎಂಸಿ ಖಾಸಗಿ ಮಾರುಕಟ್ಟೆ ಮುಂದೆ ಮಂಡಿಯೂರಿದೆ. ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವುದನ್ನು ಬಂದ್ ಮಾಡಿಸುವಂತೆ 75 ದಿನಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಯಾವುದು ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು

ಎಪಿಎಂಸಿ ಕಚೇರಿಯ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಕುಳಿತ ವೇಳೆ ಜಿಲ್ಲಾಧಿಕಾರಿ ಸಮಿತಿ ರಚನೆ ಮಾಡಿ ತನಿಖೆ ಮಾಡುವುದಾಗಿ ಹೇಳಿದ್ದರು. ಈ ವಿಷಯದ ಕುರಿತು ಇಲ್ಲಿಯವರೆಗೆ ಏನಾಗಿದೆ ಎಂದು ಸ್ಪಷ್ಟವಾಗಿಲ್ಲ ಎಂದರು. ಇದನ್ನೂ ಓದಿ: ಪರಿಹಾರದ ಹಣಕ್ಕಾಗಿ ಅಧಿಕಾರಿಯ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಮಹಿಳೆ

ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಮಾತನಾಡಿ, ಸಿದ್ದಲಿಂಗಪ್ಪ ಬಾವಿ 2011ರಲ್ಲಿ ಮೃತಪಟ್ಟ ವ್ಯಕ್ತಿಯ ಹೆಸರಿನ ಮೇಲೆ ಭೂಪರಿವರ್ತನೆ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಜೈಕಿಸಾನ್ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲು ಎನ್‍ಎ ಲೇಔಟ್‍ಗೆ ಅರ್ಜಿ ಸಲ್ಲಿಸಿದ್ದರು. ಖಾಸಗಿ ಮಾರುಕಟ್ಟೆ ನಿರ್ಮಾಣ ಮಾಡಲು ಅಧಿಕಾರಿಗಳು ಹಾಗೂ ಸರ್ಕಾರ ಸಹಕಾರ ಮಾಡಿದೆ. ಪ್ರಕರಣ ದಾಖಲಾದ ಅಧಿಕಾರಿಗಳ ಮೇಲೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Leave a Reply

Your email address will not be published.

Back to top button