ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿ ಎಪಿಎಂಸಿ ವರ್ತಕರ ಆಕ್ರೋಶ ಮುಂದುವರಿದಿದೆ. ಖಾಸಗಿ ಮಾರುಕಟ್ಟೆ ಬಂದ್ ಮಾಡಿ ಇಲ್ಲ ದಯಾಮರಣಕ್ಕೆ ಅವಕಾಶ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಬೆಳಗಾವಿ ಸರ್ಕಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವರ್ತಕರು ಮನವಿ ಮಾಡಿಕೊಂಡಿದ್ದಾರೆ.
Advertisement
ನಗರದ ಡಿಸಿ ಕಚೇರಿಗೆ ಆಗಮಿಸಿದ ಸರ್ಕಾರಿ ಎಪಿಎಂಸಿ ವರ್ತಕರು ಖಾಸಗಿ ತರಕಾರಿ ಮಾರುಕಟ್ಟೆ ರದ್ದು ಮಾಡುವಂತೆ ಆಗ್ರಹಿಸಿದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಎಪಿಎಂಸಿ ಹೋಲ್‍ಸೇಲ್ ತರಕಾರಿ ಮಾರುಕಟ್ಟೆ ಉಳಿಸಬೇಕು. ಖಾಸಗಿ ಮಾರುಕಟ್ಟೆ ಬಂದ್ ಮಾಡಬೇಕು. ಎಪಿಎಂಸಿ ಕಾಯ್ದೆ ಪರಿಣಾಮವಾಗಿ ಬೆಳಗಾವಿ ಸರ್ಕಾರಿ ಎಪಿಎಂಸಿ ಮಾರುಕಟ್ಟೆ ಇದ್ದರೂ ಪರ್ಯಾಯವಾಗಿ ಖಾಸಗಿ ಜೈಕಿಸಾನ್ ತರಕಾರಿ ಮಾರುಕಟ್ಟೆಗೆ ಅನುಮತಿ ಕೊಡಲಾಗಿದೆ. ಇದರಿಂದ ಸರ್ಕಾರಿ ಎಪಿಎಂಸಿ ವರ್ತಕರು ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಮುಖ್ಯಮಂತ್ರಿಗಳು ಖಾಸಗಿ ಮಾರುಕಟ್ಟೆ ಬಂದ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಜಾರಿಯಾಗುತ್ತಾ ಯುಪಿ ಮಾದರಿ ಜನಸಂಖ್ಯಾ ನಿಯಂತ್ರಣ ಕಾನೂನು?
Advertisement
Advertisement
ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಉಳಿಸುವಂತೆ ವರ್ತಕರು, ರೈತರು ನಡೆಸುತ್ತಿರುವ ಹೋರಾಟ 55ನೇ ದಿನಕ್ಕೆ ಕಾಲಿಟ್ಟಿದೆ. ಕಾನೂನಿನ ಪ್ರಕಾರ ಲಕ್ಷಾಂತರ ರೂಪಾಯಿ ಕೊಟ್ಟು ಎಪಿಎಂಸಿಯಲ್ಲಿ ಅಂಗಡಿ ಪಡೆದ ವರ್ತಕರು ಬೀದಿಗೆ ಬಂದಿದ್ದಾರೆ. ಖಾಸಗಿ ಮಾರುಕಟ್ಟೆ ಆರಂಭವಾಗಿದ್ದರಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಶೇ.80ರಷ್ಟು ವ್ಯಾಪಾರ ಕುಸಿತವಾಗಿದೆ. ಹೀಗಾಗಿ ಬೆಳಗಾವಿ ಎಪಿಎಂಸಿ ಉಳಿಸಲು ಸಿಎಂ ಬೊಮ್ಮಾಯಿ ಒಂದು ವಾರದಲ್ಲಿ ಕ್ರಮ ಕೈಗೊಳ್ಳಬೇಕಿದೆ. ಖಾಸಗಿ ಮಾರುಕಟ್ಟೆ ಬಂದ್ ಮಾಡದಿದ್ದರೆ ದಯಾಮರಣಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್
Advertisement
ಮನವಿ ಸ್ವೀಕರಿಸಲು ಬಂದ ಡಿಸಿ ಬಿಳಿ ಹೋರಾಟಗಾರರು ತಮ್ಮ ನೋವವನ್ನು ತೊಡಿಕೊಂಡಿದ್ದಾರೆ. ಒಟ್ಟಾರೆ, ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ವಾಪಸ್ ಪಡೆದ್ರು ರಾಜ್ಯ ಸರ್ಕಾರ ಇನ್ನೂ ವಾಪಸ್ ಪಡೆದಿಲ್ಲ. ಇದರಿಂದ ಬೆಳಗಾವಿ ಎಪಿಎಂಸಿ ತರಕಾರಿ ಮಾರುಕಟ್ಟೆ ಮುಚ್ಚುವಂತಹ ಸ್ಥಿತಿಗೆ ಬಂದು ತಲುಪಿದ್ದು ದುರಂತವೇ ಸರಿ.