ಬೆಂಗಳೂರು: ಬಿಜೆಪಿ ಹಾಗೂ ಪ್ರತಿಪಕ್ಷಗಳ ಒಗ್ಗಟ್ಟಿಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಎನ್‍ಡಿಎ ಅಭ್ಯರ್ಥಿಯಾಗಿ ಹರಿವಂಶ್ ಹಾಗೂ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕದ ಹಿರಿಯ ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ಕಣಕ್ಕಿಳಿದಿದ್ದಾರೆ.
ಕುರಿಯನ್ ನಿವೃತ್ತಿ ಹಿನ್ನೆಲೆಯಲ್ಲಿ ಚುನಾವಣೆ ನಡೀತಿದ್ದು, ಬೆಳಗ್ಗೆ 11 ಗಂಟೆಗೆ ಮತದಾನ ನಿಗದಿಯಾಗಿದೆ. 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿದ್ದರೂ ಅದರ ನೇತೃತ್ವದ ಎನ್‍ಡಿಎಗೆ ಬಹುಮತವಿಲ್ಲ. ಹೀಗಾಗಿ ಅನ್ಯ ಪಕ್ಷಗಳನ್ನು ಅದು ನೆಚ್ಚಿಕೊಂಡಿದೆ. ಪ್ರತಿಪಕ್ಷಗಳ ಕೂಟ ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಬಹುಮತಕ್ಕೆ 123 ಸದಸ್ಯಬಲ ಅಗತ್ಯವಿದೆ.
Advertisement
ಎನ್‍ಡಿಎಗೆ ಶಿವಸೇನೆ ಬೆಂಬಲ ಘೋಷಣೆ ಮಾಡಿದ್ದು, ಬಿಜು ಜನತಾದಳ, ತೆಲಂಗಾಣ ರಾಷ್ಟ್ರ ಸಮಿತಿ ಕೂಡ ಬೆಂಬಲಿಸುವ ಸಾಧ್ಯತೆ ಇದೆ. ಹೀಗಾಗಿ ತನ್ನ ಬಳೀ 129 ಮತಗಳಿವೆ ಎಂದು ಎನ್‍ಡಿಎ ಹೇಳಿಕೊಳ್ತಿದ್ದು ಜಯದ ವಿಶ್ವಾಸದಲ್ಲಿದೆ.
Advertisement