ಮುಂಬೈ: ಜೀವಂತವಾಗಿರಲು ಬಯಸಿದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಹಣ ಕೊಡಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಮತ್ತೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದಿದೆ.
ಈ ಸಂಬಂಧ ಮುಂಬೈ ಪೊಲೀಸರಿಗೆ ವಾಟ್ಸಪ್ ಸಂದೇಶ ಬಂದಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್‌ಗೆ ಬಂದ ಎರಡನೇ ಕೊಲೆ ಬೆದರಿಕೆ ಇದಾಗಿದೆ. ಇದನ್ನೂ ಓದಿ: ಆತ್ಮಹತ್ಯೆಗೂ ಮುನ್ನ ಹಗ್ಗ, ಕರ್ಟನ್ ಖರೀದಿಸಿದ್ದ ಗುರುಪ್ರಸಾದ್
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಸಂದೇಶ ಬಂದಿದೆ. ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಕಳುಹಿಸಲಾದ ಸಂದೇಶದಲ್ಲಿ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡಿದ್ದಾರೆ ಎನ್ನಲಾಗಿದೆ. ‘ಸಲ್ಮಾನ್ ಖಾನ್ ಬದುಕಬೇಕಾದರೆ, ಅವರು ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಬೇಕು. ಇಲ್ಲವೇ 5 ಕೋಟಿ ರೂ. ನೀಡಬೇಕು. ಹಾಗೆ ಮಾಡದಿದ್ದರೆ ನಾವು ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್ ಸಕ್ರಿಯವಾಗಿದೆ’ ಎಂದು ಬೆದರಿಕೆ ಹಾಕಿದ್ದಾರೆ.
ಕಳೆದ ವಾರ, ಅ.30 ರಂದು ಮುಂಬೈ ಸಂಚಾರ ನಿಯಂತ್ರಣವು ಸಲ್ಮಾನ್ ಖಾನ್ ವಿರುದ್ಧ ಇದೇ ರೀತಿಯ ಬೆದರಿಕೆಯನ್ನು ಸ್ವೀಕರಿಸಿತ್ತು. 2 ಕೋಟಿಗೆ ಬೇಡಿಕೆಯಿತ್ತು. ಬಾಂದ್ರಾ ಪೂರ್ವದ ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂಬಾತನನ್ನು ತಕ್ಷಣವೇ ಬಂಧಿಸಲಾಯಿತು. ಇದನ್ನೂ ಓದಿ: ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಗ್ಯಾಂಗ್‌ನಿಂದ ಹಲ್ಲೆ