ಇತ್ತೀಚೆಗೆ ಗೋವಾ ಸಿನಿಮೋತ್ಸವದಲ್ಲಿ ಜ್ಯೂರಿಯಾಗಿದ್ದ ನಡಾವ್ ಲಾಪಿಡ್ (Nadav Lapid) `ಕಾಶ್ಮೀರ್ ಫೈಲ್ಸ್’ (The Kashmir Files) ಚಿತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ನಡಾವ್ ವಿರುದ್ಧ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಡಾವ್ ಕ್ಷಮೆ ಕೇಳಿದ್ದಾರೆ.
`ಕಾಶ್ಮೀರಿ ಫೈಲ್ಸ್’ ಸಿನಿಮಾ ಅಶ್ಲೀಲ ಪ್ರಚಾರದ ಸಿನಿಮಾ ಎಂದು ಹೇಳಿಕೆ ನೀಡುವ ಮೂಲಕ ಅನೇಕರ ಕೆಂಗಣ್ಣಿಗೆ ನಡಾವ್ ಲಾಪಿಡ್ ಗುರಿಯಾಗಿದ್ದರು. ಬಳಿಕ ಈ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ನಡಾವ್ ಹೇಳಿಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದರು. ಈಗ ಕಾಶ್ಮೀರಿ ಪಂಡಿತ್ ಸಮುದಾಯವನ್ನು ಅವಮಾನಿದೋದು ನನ್ನ ಉದ್ದೇಶವಲ್ಲ ಕ್ಷಮಿಸಿ ಎಂದು ನಡಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನ.28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್‌ನ ಖ್ಯಾತ ನಿರ್ದೇಶಕ ನಡಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು. ʻಕಾಶ್ಮೀರ ಫೈಲ್ಸ್ʼ ಸಿನಿಮಾ ವೀಕ್ಷಿಸಿ ತುಂಬಾ ಡಿಸ್ಟರ್ಬ್ ಆಗಿದ್ದೀವಿ. ಇದೊಂದು ಅಶ್ಲೀಲ ಪ್ರಚಾರದ ಸಿನಿಮಾ. ಇಂಥ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ಹೇಳುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದರು.



