ಅಂತ್ಯಸಂಸ್ಕಾರವನ್ನಾದ್ರೂ ಗೌರವಯುತವಾಗಿ ನಡೆಸಿ: ಸರ್ಕಾರಕ್ಕೆ ಹೆಚ್‍ಡಿಕೆ ಮನವಿ

Public TV
1 Min Read

ಬೆಂಗಳೂರು: ವೆಂಟಿಲೇಟರ್ ಸೇರಿದ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರ್ಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಹೆಚ್‍ಡಿಕೆ ಆಗ್ರಹಿಸಿದ್ದಾರೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ. ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರ್ಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರ್ಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರ್ಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *