ಅಕ್ರಮ ಸಂಬಂಧ ಪ್ರಶ್ನಿಸಿದ ಹೆಂಡ್ತಿಯನ್ನ ಕೊಂದು, ಆತ್ಮಹತ್ಯೆಗೆ ಶರಣಾದ ಪತಿ

Public TV
1 Min Read

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೂಡ್ಲುಗೇಟ್ ನ ಎಎಫ್‍ಸಿಎಲ್ ಲೇಔಟ್ ನಲ್ಲಿ ನಡೆದಿದೆ.

ಮುನೀಶ್ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ. ಬಿಹಾರ ಮೂಲದವನಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಮನೆಯಲ್ಲಿ ಪತ್ನಿಯಿದ್ದರೂ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ಬಗ್ಗೆ ಪತ್ನಿ ಪ್ರಶ್ನೆ ಮಾಡಿದ್ದಕ್ಕೆ ಆಕೆಯನ್ನು ಕೊಲೆಗೈದು, ತಾನು ಸಹ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅನೈತಿಕ ಸಂಬಂಧ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇಂದು ನಡೆದ ಜಗಳ ವಿಕೋಪಕ್ಕೆ ತಿರುಗಿ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *