ಅನ್ನದಾತರ ಬಾಳು ಹಸನಾಗಲು ಸಮಗ್ರ ಕೃಷಿ ಅಭಿಯಾನ ಸಹಕಾರಿ: ಶಶಿಕಲಾ ಜೊಲ್ಲೆ

Public TV
1 Min Read

ಚಿಕ್ಕೋಡಿ: ಅನ್ನದಾತರ ಬಾಳು ಹಸನಾಗಲು ಸಮಗ್ರ ಕೃಷಿ ಅಭಿಯಾನ ಸಹಕಾರಿಯಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಇಲಾಖೆ ವತಿಯಿಂದ ಸಮಗ್ರ ಕೃಷಿ ಅಭಿಯಾನ ಹಾಗೂ “ನನ್ನ ಬೆಳೆ ನನ್ನ ಹಕ್ಕು” ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ಗೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ಚಾಲನೆ ನೀಡಿ ನೀಡಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಅಭಿಯಾನದ ವಾಹನಕ್ಕೆ ಹಸಿರು ನಿಶಾನೆ ತೋರಿಸುವದರ ಮೂಲಕ ಚಾಲನೆ ನೀಡಲಾಯಿತು. ಇದನ್ನೂ ಓದಿ: ಪಂಚರ್ ಆಗಿ ಹಿಮ್ಮುಖವಾಗಿ ಚಲಿಸಿ ಟ್ರ್ಯಾಕ್ಟರ್ ಪಲ್ಟಿ

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಶಿಕಲಾ ಜೊಲ್ಲೆ, ಈ ಸಮಗ್ರ ಕೃಷಿ ಅಭಿಯಾನದ ವಾಹನವು, ಗ್ರಾಮ-ಗ್ರಾಮಗಳಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸುತ್ತದೆ. ಗೊಬ್ಬರ, ಬೀಜಗಳ, ಕ್ರಿಮಿನಾಶಕಗಳ, ಕೃಷಿ ಯಂತ್ರೋಪಕರಣಗಳ ಹಾಗೂ ರೈತರ ಜಮೀನುಗಳ ವಿಮೆಯ ಬಗ್ಗೆ ಮಾಹಿತಿ ಒದಗಿಸುತ್ತದೆ. ಈ ಸಮಗ್ರ ಕೃಷಿ ಅಭಿಯಾನ ಮೊಬೈಲ್ ಆ್ಯಪ್ ನಲ್ಲಿಯೂ ಲಭ್ಯವಿದ್ದು, ಇದರಲ್ಲಿ ರೈತರಿಗೆ ಕೃಷಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಸುಲಭವಾಗಿ ಸಿಗುತ್ತವೆ. ಇದೊಂದು ವಿನೂತನ ಹಾಗೂ ಉತ್ತಮ ಕಾರ್ಯವಾಗಿದ್ದು, ಬಿಜೆಪಿ ಸರ್ಕಾರದ ಯೋಜನೆಗಳು ರೈತರ ಬಳಿ ತಲುಪಿ ಅವರ ಕೃಷಿಕಾರ್ಯ ಸಮೃದ್ಧಿಯಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: 107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

ಈ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ್ ಜನಮಟ್ಟಿ, ಉಪನಿರ್ದೇಶಕರಾದ ಜೆ.ಎಲ್. ರೂಡಗಿ, ಸಹಾಯಕ ಕೃಷಿ ಅಧಿಕಾರಿ ಪುರುಷೋತ್ತಮ ಪಿರಾಜೆ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *