ಅಮಿತ್ ಶಾ ಹುಟ್ಟುಹಬ್ಬ- ಭಾವನಾತ್ಮಕ ಸಂದೇಶದಿಂದ ಶುಭ ಕೋರಿದ ಪ್ರಧಾನಿ ಮೋದಿ

Public TV
2 Min Read

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಘಟನೆಯಲ್ಲಿ ತಮ್ಮದೇಯಾದ ವಿಶಿಷ್ಟ ಕೆಲಸಗಳ ಮೂಲಕ ಮೆಚ್ಚುಗೆ ಗಳಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 56ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಭಾವನಾತ್ಮಕವಾಗಿ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

ಭಾರತಕ್ಕೆ ನೀವು ನೀಡಿದ ಸಮರ್ಪಣೆ ಹಾಗೂ ಉತ್ಕೃಷ್ಟತೆಗೆ ನಮ್ಮ ದೇಶ ಸಾಕ್ಷಿಯಗಿದೆ. ನಿಮ್ಮ ಪ್ರಯತ್ನದಿಂದ ಬಿಜೆಪಿ ಬಲಿಷ್ಟವಾಗಿದೆ, ಗುರುತಿಸಿಕೊಳ್ಳುವಂತಾಗಿದೆ. ಭಾರತಕ್ಕೆ ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ದೇವರು ನಿಮಗೆ ಸುದೀರ್ಘ ಆಯಸ್ಸು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಅವರು 1964ರಲ್ಲಿ ಮುಂಬೈನಲ್ಲಿ ಜನರಿಸಿದ್ದು, ಚಿಕ್ಕಂದಿನಿಂದಲೂ ಆರ್‍ಎಸ್‍ಎಸ್‍ನಲ್ಲಿ ಗುರುತಿಸಿಕೊಂಡಿದ್ದಾರೆ. ಗುಜರಾತ್‍ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿದ್ದಾಗ ಸಹ ಅಮಿತ್ ಶಾ ಗೃಹ ಸಚಿವರಾಗಿದ್ದರು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಮಿತ್ ಶಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿಸಿದ ಬಳಿಕ ಹಲವು ಚುನಾವಣೆಗಳ ನಾಯಕತ್ವ ವಹಿಸಿಕೊಂಡು ಗೆಲ್ಲಿಸಿ ಕೊಟ್ಟಿದ್ದಾರೆ. ಉತ್ತರ, ಪೂರ್ವ ಭಾಗದಲ್ಲಿ ಸಹ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಅಮಿತ್ ಶಾ ಅವರನ್ನು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಈ ವೇಳೆ ಅವರ ನಾಯಕತ್ವದಲ್ಲಿ 80 ಲೋಕಸಭಾ ಸ್ಥಾನಗಳ ಪೈಕಿ ಎನ್‍ಡಿಎ ಮೈತ್ರಿ ಕೂಟ ಬರೋಬ್ಬರಿ 73 ಸ್ಥಾನಗಳಲ್ಲಿ ಜಯಗಳಿಸಿತ್ತು.

2019ರ ಲೋಕಸಭಾ ಚುನಾವಣೆಯಲ್ಲಿ ಸಹ ಅಮಿತ್ ಶಾ ಅವರು ಬಿಜೆಪಿ ಚುನಾವಣಾ ಪ್ರಚಾರವನ್ನು ನಿರ್ವಹಿಸಿದ್ದರು. ತಾವೂ ಸಹ ಪ್ರಚಾರ ಮಾಡಿದ್ದರು. ಈ ವೇಳೆ ಬಿಜೆಪಿ 303 ಸ್ಥಾನಗಳಲ್ಲಿ ಜಯಗಳಿಸಿತ್ತು. ಈ ಮೂಲಕ 1971ರ ಬಳಿಕ ಪೂರ್ಣ ಬಹುಮತದೊಂದಿಗೆ ಪಕ್ಷ ಬಿಜೆಪಿ ಎಂಬ ಹೆಗ್ಗಳಿಕೆಗೆ ಪಾತ್ರವಗಿದೆ.

ಅಮಿತ್ ಶಾ ಅವರು ಗಾಂಧಿ ನಗರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಗಿದ್ದಾರೆ. ಮೋದಿ ಸರ್ಕಾರದ ಎರಡನೇ ಅಧಿಕಾರಾವಧಿಯಲ್ಲಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು. ನಂತರ ಗೃಹ ಸಚಿವರನ್ನಾಗಿ ಮಾಡಲಾಯಿತು.

Share This Article
Leave a Comment

Leave a Reply

Your email address will not be published. Required fields are marked *