ಬೆಂಗಳೂರು: ಇಂದು ಕರ್ನಾಟಕದಲ್ಲಿ 755 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 976 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು3 ಮಂದಿ ಸಾವನ್ನಪ್ಪಿದ್ದಾರೆ.
ಬ್ರಿಟನ್‌ನಿಂದ ಬಂದವರ ಪೈಕಿ ಇಂದು 67 ಮಂದಿಗೆ ಪರೀಕ್ಷೆ ಮಾಡಿದ್ದು ಈ ಪೈಕಿ ಒಬ್ಬರಿಗೆ ಕೊರೊನಾ ಬಂದಿದೆ. 66 ಮಂದಿಯ ಫಲಿತಾಂಶ ಲಭ್ಯವಾಗಬೇಕಿದೆ.
ಇಲ್ಲಿಯವರೆಗೆ ಒಟ್ಟು 2,028 ಮಂದಿಗೆ ಟೆಸ್ಟ್ ಮಾಡಿದ್ದು 33 ಮಂದಿಗೆ ಸೋಂಕು ಬಂದಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,21,128ಕ್ಕೆ ಏರಿಕೆ ಆಗಿದೆ. ಈ ಪೈಕಿ 8,98,176 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 10,384 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,099 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 186 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 5,065 ಆಂಟಿಜನ್ ಟೆಸ್ಟ್, 1,09,058 ಆರ್‌ಟಿ ಪಿಸಿಆರ್ ಸೇರಿದಂತೆ ಒಟ್ಟು 1,14,123 ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 1,41,96,065 ಕೋವಿಡ್ ಪರೀಕ್ಷೆ ಮಾಡಲಾಗಿದೆ.
ಎಂದಿನಂತೆ ಬೆಂಗಳೂರು ನಗರದಲ್ಲಿ 343 ಮಂದಿಗೆ ಸೋಂಕು ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 78,, ದಕ್ಷಿಣ ಕನ್ನಡ 37, ತುಮಕೂರಿನಲ್ಲಿ 20 ಮಂದಿಗೆ ಸೋಂಕು ಬಂದಿದೆ.
ಐಸಿಯುನಲ್ಲಿಒಟ್ಟು 186 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 81, ಗದಗ, ಕಲಬುರಗಿಯಲ್ಲಿ ತಲಾ 11 ಮಂದಿ ಇದ್ದಾರೆ.