ಉಗುಳುವುದನ್ನು ನಿಲ್ಲಿಸಿ(Stop Spitting) ಜಾಥಾಗೆ ಚಾಲನೆ

Public TV
1 Min Read

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ಉಗುಳುವ ಅಭ್ಯಾಸವನ್ನು ಬಿಡಬೇಕು ಎನ್ನುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಉಗುಳುವುದನ್ನು ನಿಲ್ಲಿಸಿ ಜಾತಾಕ್ಕೆ ಇಂದು ಚಾಲನೆ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಿ(Stop Spitting)ಎಂಬ ಜಾಗೃತಿ ಜಾಥಾಗೆ ಚಾಲನೆ ನೀಡಿದ ಬಳಿಕ ವಿಶೇಷ ಆಯುಕ್ತರು(ಆರೋಗ್ಯ) ಡಿ.ರಂದೀಪ್ ಮಾತನಾಡಿದ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಿ ಎಂಬ ಜಾಗೃತಿ ಜಾಥಾವು ರೋಟರಿ, ನಮ್ಮ ಬೆಂಗಳೂರು ಪೌಂಡೇಷನ್, ಬ್ಯೂಟಿಫುಲ್ ಬೆಂಗಳೂರು ಹಾಗೂ ಇನ್ನಿತರೆ 20 ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿದ್ದು, ಇದರಲ್ಲಿ ಪಾಲಿಕೆಯ ಅಧಿಕಾರಿಗಳು ಹಾಗೂ ಮಾರ್ಷಲ್‍ಗಳು ಸಹ ಪಾಲ್ಗೊಳ್ಳಲಿದ್ದಾರೆ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ಉಗುಳುವ ಅಭ್ಯಾಸವನ್ನು ಬಿಡಬೇಕು. ಎಲ್ಲೆಂದರಲ್ಲಿ ಉಗುಳುವುದರಿಂದ ಕೊರೊನಾ, ಕ್ಷಯ ರೋಗ ಸೇರಿದಂತೆ ಇನ್ನಿತರೆ ರೋಗಗಳು ಹರಡಲಿವೆ ಎಂದು ತಿಳಿಸಿದರು. ಇದನ್ನೂ ಓದಿ:  BB ಗೆದ್ದು ಬನ್ನಿ ಮಂಜು, ಲವ್ ಯೂ: ಶಿವರಾಜ್‍ಕುಮಾರ್

ನಗರದ ಪಾದಚಾರಿ ಮಾರ್ಗ, ಬಸ್ ನಿಲ್ದಾಣ, ಬಸ್ ತಂಗುದಾಣ, ಟ್ರಾಫಿಕ್ ಸಿಗ್ನಲ್ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಉಗುಳುವುದರಿಂದ ಅಲ್ಲಿ ಸ್ವಚ್ಛತೆ ಹಾಳಾಗುವುದರ ಜೊತೆಗೆ ಸೌಂದರ್ಯ ಹಾಳಾಗುತ್ತದೆ. ಅಲ್ಲದೆ ನೋಡುಗರಿಗೆ ಕೆಟ್ಟದಾಗಿ ಕಾಣುತ್ತದೆ. ಈ ನಿಟ್ಟಿನಲ್ಲಿ ಎಲ್ಲೂ ಉಗುಳಬಾರದೆಂಬುದರ ಬಗ್ಗೆ ನಾಗರಿಕರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದರು.

ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳವ ಜವಾಬ್ದಾರಿ ಎಲ್ಲರ ಮೇಲಿದೆ. ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಉಗುಳುತ್ತಿದ್ದರೆ ಅವರಿಗೆ ಉಗುಳುವುದರಿಂದ ರೋಗಳಳು ಹರಡಿವೆ. ಆದ್ದರಿಂದ ಉಗುಳೂವುದನ್ನು ಬಿಡಿ ಜೊತೆಗೆ ಇತರರಿಗೂ ಉಗುಳಬೇಡಿ ಎಂದು ಅರಿವು ಮೂಡಿಸುವ ಕೆಲಸ ಆಗಬೇಕಿದೆ. ನಗರವನ್ನು ಸ್ವಚ್ಛವಾಗಿಟ್ಟುಕೊಂಡರೆ ಸ್ವಚ್ಛ ಸರ್ವೇಕ್ಷನ್ ಅಭಿಯಾನದಲ್ಲಿ ಉತ್ತಮ ಅಂಕ ಪಡೆಯಬಹುದು ಇದಕ್ಕೆ ಎಲ್ಲಾ ನಾಗರಿಕರ ಸಹಕಾರ ಅಗತ್ಯ ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳದೆ ಇರುವುದನ್ನು ನಾಗರಿಕರು ಅಭ್ಯಾಸ ಮಾಡಿಕೊಂಡಾಗ ನಗರ ಸ್ವಚ್ಛವಾಗಿ ಕಾಣುತ್ತದೆ. ಈ ಬಗ್ಗೆ ನಾಗರಿಗೆ ಸಂದೇಶ ರವಾನೆಯಾಗಬೇಕು ಎಂದ ವಿಶೇಷ ಆಯುಕ್ತರು ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಬೈಲಾದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಬಹುದಾಗಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *