ಉಡುಪಿಯ BRS ಉಚಿತ ಆಸ್ಪತ್ರೆ ಸರ್ಕಾರದ ಸುಪರ್ದಿಗೆ

Public TV
2 Min Read

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಉಚಿತ ಆಸ್ಪತ್ರೆಯನ್ನು ಸರ್ಕಾರವೇ ಮುನ್ನಡೆಸುತ್ತದೆ. ಕೆಲ ಪತ್ರ ವ್ಯವಹಾರಗಳು ನಡೆದ ಮೇಲೆ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ

ಆಸ್ಪತ್ರೆಯನ್ನು ಮುನ್ನಡೆಸುವ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಸಾಧಕ ಬಾಧಕಗಳ ಕುರಿತಂತೆ ಸಮಗ್ರವಾಗಿ ಚರ್ಚೆ ಮಾಡಲಾಯ್ತು.

ಕಳೆದ ಐದಾರು ತಿಂಗಳಿನಿಂದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸಂಬಳ ನೀಡಲಾಗಿಲ್ಲ. ಉಚಿತ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೆಲ ತಿಂಗಳಿನಿಂದ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು, ಸಿಬ್ಬಂದಿ ಆಗಾಗ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದರು. ರೋಗಿಗಳಿಗೆ ಯಾವುದೇ ಸೇವೆಗಳನ್ನು ನೀಡಲು ನಿರಂತರ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿದ್ದರು. ಇಷ್ಟಾಗುತ್ತಲೇ ಆರೋಗ್ಯ ಇಲಾಖೆ ಅಧಿಕಾರಿಗಳು, ಉಡುಪಿ ಶಾಸಕ ರಘುಪತಿ ಭಟ್ ಜೊತೆ ಸಚಿವ ಸುಧಾಕರ್ ಸಭೆ ನಡೆಸಿ ಎಲ್ಲ ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ.

ಉಡುಪಿ ಮೂಲದ ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ತಂದೆ-ತಾಯಿಯ ಹೆಸರಿನಲ್ಲಿ ಆಸ್ಪತ್ರೆಯನ್ನು ಉಡುಪಿಯಲ್ಲಿ ಕಟ್ಟಿಸಿ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದರು. ಆರ್ಥಿಕ ಸಮಸ್ಯೆಗೆ ಸಿಲುಕಿದ ನಂತರ ಬಿ.ಆರ್.ಶೆಟ್ಟಿ ಆಸ್ಪತ್ರೆಯನ್ನು ಸರ್ಕಾರವೇ ಸುಪರ್ದಿಗೆ ತೆಗೆದುಕೊಂಡು ಮುಂದುವರಿಸುವಂತೆ ಕೋರಿದ್ದರು. ಈ ಬಗ್ಗೆ ಸಭೆ ನಡೆಸಿ ಕೆಲ ಪತ್ರ ವ್ಯವಹಾರಗಳು ಮುಗಿದ ನಂತರ ರಾಜ್ಯ ಸರ್ಕಾರವೇ ಆಸ್ಪತ್ರೆಯನ್ನು ಸುಪರ್ದಿಗೆ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತರಾದ ಕೆ.ವಿ. ತ್ರಿಲೋಕ್ ಚಂದ್ರ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಉಪಸ್ಥಿತರಿದ್ದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ಅಮಾನತು ಮಾಡಿ, ಅವರ ವಿರುದ್ಧ ತನಿಖೆ ನಡೆಸಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

Share This Article
Leave a Comment

Leave a Reply

Your email address will not be published. Required fields are marked *