ಕುದ್ಮುಲ್ ರಂಗರಾವ್ ಸ್ಮಾರಕ ಅಭಿವೃದ್ಧಿಗೆ 3 ಕೋಟಿ ಅನುದಾನ -ಶಾಸಕ ವೇದವ್ಯಾಸ್ ಕಾಮತ್

Public TV
3 Min Read

ಮಂಗಳೂರು: ಕುದ್ಮುಲ್ ರಂಗರಾವ್ ಅವರ ಸ್ಮಾರಕವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು 3 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.

ಕುದ್ಮುಲ್ ರಂಗರಾವ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಅತ್ತಾವರ ಬಾಬುಗುಡ್ಡೆಯಲ್ಲಿರುವ ಅವರ ಸ್ಮಾರಕದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕಾಮತ್, ಕುದ್ಮುಲ್ ರಂಗರಾವ್ ಅವರು ಹಿಂದುಳಿತದ ವರ್ಗದ ಜನರಿಗಾಗಿ ತನ್ನ ಬದುಕನ್ನು ಶ್ರೀಗಂಧದಂತೆ ಸವೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ತನ್ನ ಸರ್ವಸ್ವವನ್ನೂ ಧಾರೆಯೆರೆದವರು. ಮುಂದಿನ ಪೀಳಿಗೆ ಕುದ್ಮುಲ್ ರಂಗರಾಯರ ಕುರಿತು ತಿಳಿಸುವ ನಿಟ್ಟಿನಲ್ಲಿ ಸ್ಮಾರಕ ಅಭಿವೃದ್ಧಿಗೆ 3 ಕೋಟಿ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. ಇದನ್ನೂ ಓದಿ:  ಲಸಿಕಾ ಕೇಂದ್ರದಲ್ಲಿ ಗಳ ಗಳನೇ ಅತ್ತ ವಿದ್ಯಾರ್ಥಿನಿ

ಸ್ಮಾರಕ ಅಭಿವೃದ್ಧಿಗೆ ಸರಿ ಸುಮಾರು 40 ಸೆಂಟ್ಸ್ ಜಾಗ ಕಾಯ್ದಿರಿಸಲಾಗಿದೆ. ಮುಂದಿನ ದಿನಗಳಲ್ಲಿ ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಮುಂಡಾಲ ಯುವ ವೇದಿಕೆ ಹಾಗೂ ಪರಿಶಿಷ್ಟ ಜಾತಿ ಪಂಗಡದ ಎಲ್ಲಾ ಮುಖಂಡರನ್ನೂ ಸೇರಿಸಿಕೊಂಡು ಸ್ಮಾರಕ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಲ್ಲಿ ಗ್ರಂಥಾಲಯ ಹಾಗೂ ಕುದ್ಮುಲ್ ರಂಗರಾವ್ ಅವರ ಪುತ್ಥಳಿಯನ್ನು ಸ್ಥಾಪಿಸಲಾಗುವುದು. ಮುಂದಿನ ದಿನಗಳಲ್ಲಿ ಇದು ಪ್ರವಾಸೋದ್ಯಮ ಕೇಂದ್ರವಾಗಲಿದೆ ಎಂದು ಶಾಸಕ ಕಾಮತ್ ಹೇಳಿದರು. ಇದನ್ನೂ ಓದಿ: ಬಾಲಕಿಯ ಚಿಕಿತ್ಸೆಗಾಗಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡಿದ ಜೆರ್ಸಿಯನ್ನು ಹರಾಜಿಗಿಟ್ಟ ಆಟಗಾರ

ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಕುದ್ಮುಲ್ ರಂಗರಾವ್ ಅವರು ಹಿಂದುಳಿದ ವರ್ಗಗಳ ಜನರ ಅಭ್ಯುದಯದ ಬಗ್ಗೆ ಕನಸು ಕಂಡಿದ್ದರು. ಅದಕ್ಕಾಗಿಯೇ ಪರಿಶಿಷ್ಟ ಜಾತಿ ಪಂಗಡದ ಜನರಿಗಾಗಿ ಶಿಕ್ಷಣ ಸಂಸ್ಥೆ ಹಾಗೂ ಸ್ವಾವಲಂಭಿ ಬದುಕಿಗಾಗಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತೆರೆದಿದ್ದರು. ಮುಂಬರುವ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕುದ್ಮುಲ್ ರಂಗರಾವ್ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 2 ವರ್ಷಗಳ ಹಿಂದೆ ಮಾರಿದ್ದ ಎತ್ತು, ವಧಾಲಯದಲ್ಲಿ ನೋಡಿದ ರೈತ

ನಿವೃತ್ತ ಸಾರಿಗೆ ಅಧಿಕಾರಿ ಕುದ್ಮುಲ್ ರಂಗರಾವ್ ರಾಷ್ಟ್ರೀಯ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿಯ ಅಧ್ಯಕ್ಷರಾದ ಕೇಶವ ಧರಣಿ ಮಾತನಾಡಿ, ಕುದ್ಮುಲ್ ರಂಗರಾಯರು ನಮ್ಮ ಸಮುದಾಯದ ಪಾಲಿಗೆ ಆಶಾ ಕಿರಣದಂತೆ ಮೂಡಿ ಬಂದವರು. ನಮ್ಮ ಮಕ್ಕಳ ವಿಧ್ಯಾಭ್ಯಾಸ ಹಾಗೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ತಮ್ಮ ಸರ್ವಸ್ವವನ್ನೂ ಧಾರೆಯೆರೆದ ಸಂತರು. ನಮ್ಮ ಸಮುದಾಯವು ಎಂದಿಗೂ ಅವರಿಗೆ ಚಿರಋಣಿಯಾಗಿರುತ್ತದೆ. ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ಮುಲ್ ರಂಗರಾವ್ ಹಾದಿಯಲ್ಲೇ ನಡೆಯುತಿದ್ದಾರೆ. ಅವರ ಅವಧಿಯಲ್ಲಿ ರಂಗರಾಯರ ಭವ್ಯ ಸ್ಮಾರಕ ನಿರ್ಮಾಣವಾಗಲಿ ಎಂದು ಹೇಳಿದರು. ಇದನ್ನೂ ಓದಿ:  ಮಂಜು, ದಿವ್ಯಾ ಸುರೇಶ್ ನಡುವೆ ಬಿರುಕು

ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶೈಲೇಶ್ ಅತ್ತಾವರ, ಭರತ್ ಕುಮಾರ್, ಮನೋಜ್ ಕೋಡಿಕಲ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು, ಕಾರ್ಯದರ್ಶಿ ಲಲ್ಲೇಶ್ ಅತ್ತಾವರ, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ವಿನಯ್ ನೇತ್ರಾ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಆಶಾ ಡಿಸಿಲ್ವ, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಜ್ವಲ್ ಚಿಲಿಂಬಿ, ನಾಗೇಶ್ ಕೊಡಕ್ಕಲ್, ಉಪಾಧ್ಯಕ್ಷರಾದ ದಯಾನಂದ ಸನ್ಯಾಸಿಗುಡ್ಡೆ, ದಿನೇಶ್ ನಂತೂರು, ಸಂದೀಪ್ ಬೋಳೂರು, ಕಾರ್ಯದರ್ಶಿ ಶ್ರೀಮತಿ ಗೀತಾ ಭವಾನಿ ಶಂಕರ್ ಸುಂಕದಕಟ್ಟೆ, ಸದಸ್ಯರಾದ ರವಿ ಕಾಪಿಕಾಡ್, ಗುರು ಪ್ರಸಾದೇ ಮೇಲಿನಮೊಗರು, ಶಕ್ತಿಕೇಂದ್ರ ಪ್ರಮುಖ ಪುಷ್ಪರಾಜ್ ಶೆಟ್ಟಿ, ಪ್ರಮೋದ್ ಕೊಟ್ಟಾರಿ, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಬಿ.ಆರ್ ಹೃದಯನಾಥ್, ಉಪಾಧ್ಯಕ್ಷರಾದ ಶ್ಯಾಮ್ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಎಸ್.ಸಿ ಮೋರ್ಚಾ ಅಧ್ಯಕ್ಷರು ಹಾಗೂ ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡೆ ಸ್ವಾಗತಿಸಿ ಕಿರಣ್ ಕುಮಾರ್ ಕೊಡಿಯಾಲ್ ಬೈಲ್ ವಂದಿಸಿದರು.

Share This Article
Leave a Comment

Leave a Reply

Your email address will not be published. Required fields are marked *