ಇದು ರಾಜ್ಯ ಬಿಜೆಪಿ ಸರ್ಕಾರದ ಸರ್ವಾಧಿಕಾರ, ದುರಹಂಕಾರ, ಹತಾಶೆಯ ನಡವಳಿಕೆ: ಸಿದ್ದರಾಮಯ್ಯ ಕಿಡಿ

Public TV
1 Min Read

ಬೆಂಗಳೂರು: ಆರ್.ಆರ್.ನಗರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಮತ್ತು ವಿಪಕ್ಷ ನಾಯಕ ಬೆಂಗಾವಲು ಸಿಬ್ಬಂದಿ ದೂರು ದಾಖಲಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಗೆ ಹೋಗುತ್ತಿದ್ದಾಗ ನಮ್ಮನ್ನು ಬಲಾತ್ಕಾರವಾಗಿ ತಡೆಯುವ ಪ್ರಯತ್ನ ಮಾಡಿದ್ದ ಪೊಲೀಸರು, ಅಭ್ಯರ್ಥಿ ಕುಸುಮಾ ಮತ್ತು ನನ್ನ ಬೆಂಗಾವಲು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದು ರಾಜ್ಯ ಬಿಜೆಪಿ ಸರ್ಕಾರದ ಸರ್ವಾಧಿಕಾರ, ದುರಹಂಕಾರ ಮತ್ತು ಹತಾಶೆಯ ನಡವಳಿಕೆ. ಚುನಾವಣೆಗಳು ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ನಡೆಯಬೇಕು ಮತ್ತು ಪೊಲೀಸರು ನಿಷ್ಪಕ್ಷಪಾತತನದಿಂದ ಕಾರ್ಯನಿರ್ವಹಿಸಬೇಕು. ಈ ಪ್ರಕರಣದಲ್ಲಿ ಚುನಾವಣಾ ಆಯೋಗವನ್ನು ಪಕ್ಕಕ್ಕೆ ಸರಿಸಿ ಪೊಲೀಸರೇ ಅತ್ಯುತ್ಸಾಹದಿಂದ ದೂರು ದಾಖಲಿಸಿರುವುದರಲ್ಲಿ ರಾಜ್ಯ ಸರ್ಕಾರದ ಕೈವಾಡ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ಆರ್‌.ಆರ್‌.ನಗರ ಉಪಚುನಾವಣೆ – ಕೋಟ್ಯಧೀಶೆ, ಸಾಲಗಾರ್ತಿ ಆಗಿದ್ದಾರೆ ಕುಸುಮಾ 

ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರು ಚುನಾವಣಾ ನೀತಿಸಂಹಿತೆ ಮತ್ತು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ್ದರೂ ಕಣ್ಣುಮುಚ್ಚಿಕೊಂಡಿದ್ದ ಪೊಲೀಸರ ನಡವಳಿಕೆ ಖಂಡನೀಯ. ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷ ದೂರು ನೀಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾರು ಚಾಲಕ, ಕೈ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲು

ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ, ಮುಂದಿನ ದಿನಗಳಲ್ಲಿ ಈ ರೀತಿ ಅಧಿಕಾರ ದುರುಪಯೋಗದ ಮೂಲಕ ನಮ್ಮನ್ನು ನಿಯಂತ್ರಿಸುವ ಪ್ರಯತ್ನ ಮಾಡಲಿರುವುದು ಸ್ಪಷ್ಟ. ಇದಕ್ಕೆ ಉಪಚುನಾವಣೆ ನಡೆಯಲಿರುವ ಎರಡು ಕ್ಷೇತ್ರಗಳ ಮತದಾರರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೇಲ್ ಪಡೆಯಲ್ಲ, ಸ್ಟೇಷನ್‍ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್‌ಗೆ ಡಿಕೆಶಿ ಕಿಡಿ

Share This Article
Leave a Comment

Leave a Reply

Your email address will not be published. Required fields are marked *