‘ಕೈ’ಗೆ ಇಂದು ನಿರ್ಣಾಯಕ ದಿನ- ಯಾರಾಗ್ತಾರೆ ಕಾಂಗ್ರೆಸ್ ನೂತನ ಸಾರಥಿ?

Public TV
1 Min Read

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆಗುತ್ತಿರುವ ಹೊತ್ತಲ್ಲೇ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಇದಕ್ಕೂ ಮುನ್ನವೇ ಹೊಸ ಅಧ್ಯಕ್ಷರನ್ನು ಒಗ್ಗಟ್ಟಾಗಿ ಆಯ್ಕೆ ಮಾಡಿ ಎಂದು ಸೋನಿಯಾ ರಾಜೀನಾಮೆ ನೀಡಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷವನ್ನು ಪುನಶ್ಚೇತನಗೊಳಿಸಬೇಕೆಂದು ಹಲವು ಹಿರಿಯ ನಾಯಕರು ಸೋನಿಯಾ ಗಾಂಧಿಯವರಿಗೆ 5 ಅಂಶಗಳ ಅಜೆಂಡಾವನ್ನು ಮುಂದಿಟ್ಟುಕೊಂಡು ಪತ್ರ ಬರೆದಿದ್ದು, ಆ ಪತ್ರಕ್ಕೆ 20 ಮಂದಿ ಸಹಿ ಹಾಕಿದ್ದಾರೆ. ಲೋಕಸಭೆ ಚುನಾವಣಾ ಸೋಲಿನ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ರಾಹುಲ್ ಅಧ್ಯಕ್ಷರಾಗ್ತಾರಾ ಅಥವಾ ಪ್ರಿಯಾಂಕಾ ಗಾಂಧಿ ಬರ್ತಾರಾ ಅಥವಾ ಸೋನಿಯಾ ಕುಟುಂಬಸ್ಥರನ್ನು ಹೊರತು ಪಡಿಸಿದ ನಾಯಕರಿಗೆ ಸಾರಥ್ಯ ಸಿಗುತ್ತಾ ಎಂಬ ಕುತೂಹಲ ಮೂಡಿದೆ.

ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಸಂಸದರು ಮತ್ತು ಮಾಜಿ ಸಚಿವರ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ, ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸ್ತಿದೆ ಎನ್ನಲಾಗುತ್ತಿದೆ.

ಇತ್ತ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬಯೇತರು ಅಧ್ಯಕ್ಷರಾಗಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಹೇಳಿದ್ದು, ಆ ಮೂಲಕ ಕಾಂಗ್ರೆಸ್ ನಾಯಕರ ಮಧ್ಯೆ ಅಧ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಗೊಂದಲ ಹೆಚ್ಚಿದೆ. ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್, ತಿರುವನಂತಪುರದದ ಸಂಸದ ಶಶಿ ತರೂರ್ ಪರ ಪ್ರಿಯಾಂಕಾ ಗಾಂಧಿ ಒಲವು ವ್ಯಕ್ತಪಡಿಸಿದ್ದರೆ. ಇತ್ತ ಮಲ್ಲಕಾರ್ಜುನ ಖರ್ಜೆ ಕೂಡ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ಮನೀಶ್ ತಿವಾರಿ ಸೇರಿದಂತೆ ಕೆಲ ನಾಯಕರು ಪಕ್ಷದ ಒಳಗಡೆ ಒಂದು ಚುನಾವಣೆ ನಡೆಸಿ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *