ಕೊರೊನಾ ರೌದ್ರ ನರ್ತನಕ್ಕೆ ಇಂದು 19 ಮಂದಿ ಬಲಿ- ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಶತಕ

Public TV
4 Min Read

ಬೆಂಗಳೂರು: ಚೀನಿ ವೈರಸ್ ರೌದ್ರ ನರ್ತನದ ಪರಿಣಾಮ ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇಂದು 19 ಮಂದಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 272ಕ್ಕೇರಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೋವಿಡ್-19 ಬುಲೆಟಿನ್ ಮಾಹಿತಿ ಅನ್ವಯ, ಬಳ್ಳಾರಿ 4, ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 3, ಗದಗ, ಉಡುಪಿ, ಕೊಪ್ಪಳ, ಮೈಸೂರು, ಹಾಸನ, ತುಮಕೂರು, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡದಲ್ಲಿ ತಲಾ 1 ಸಾವಿನ ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 113 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ರಾಜ್ಯದಲ್ಲಿ ಒಟ್ಟಾರೆ 161 ಮಂದಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಇಂದಿನ 3 ಸಾವಿನ ಪ್ರಕರಣಗಳೊಂದಿಗೆ ಸಾವಿನದ ಸಂಖ್ಯೆ 100ಕ್ಕೇರಿದೆ.

ಸಾವನ್ನಪ್ಪಿದವರ ವಿವರ:

1) ರೋಗಿ-8209: ಬೆಂಗಳೂರಿನ 66 ವರ್ಷದ ವೃದ್ಧೆ. ಚಿಕ್ಕಬಳ್ಳಾಪುರ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ. ಜ್ವರ, ಉಸಿರಾಟದ ಸಮಸ್ಯೆ, ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 20 ರಂದು ಆಸ್ಪತ್ರೆ ದಾಖಲಾಗಿದ್ದ ಇವರು ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

2) ರೋಗಿ-9730: ಗದಗ ಜಿಲ್ಲೆಯ 75 ವರ್ಷದ ವೃದ್ಧ. ವಿಷಮ ಶೀತ ಜ್ವರ(ಸಾರಿ), ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಜೂನ್ 23 ರಂದು ಆಸ್ಪತ್ರೆ ದಾಖಲಾಗಿದ್ದು, ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

3) ರೋಗಿ-10218: ಬಳ್ಳಾರಿಯ 43 ವರ್ಷದ ಪುರುಷ. ಸಾರಿ ಮತ್ತು ಕೆಮ್ಮು, ಉಸಿರಾಟದ ಸಮಸ್ಯೆಯಿಂದ ಜೂನ್ 25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

4) ರೋಗಿ-10478: ಬೆಂಗಳೂರಿನ 79 ವರ್ಷದ ವೃದ್ಧ. ಸಾರಿ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ, ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 22 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರು ಜೂನ್ 30 ರಂದು ಸಾವನ್ನಪ್ಪಿದ್ದರು.

5) ರೋಗಿ-11387: ದಕ್ಷಿಣ ಕನ್ನಡದ 76 ವರ್ಷದ ವೃದ್ಧ. ಕಿಡ್ನಿಗೆ ಸಂಬಂಧಿಸಿದ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಉಸಿರಾಟದ ಸಮಸ್ಯೆಯಿಂದ ಜೂನ್ 25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

6) ರೋಗಿ-13296: ದಕ್ಷಿಣ ಕನ್ನಡದ 48 ವರ್ಷದ ಪುರುಷ. ತೀವ್ರ ಉಸಿರಾಟದ ಸಮಸ್ಯೆ (ಐಎಲ್‍ಐ) ಸಮಸ್ಯೆಯಿಂದ ಜೂನ್ 27 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಪಲ್ಯದ ಕಾರಣ ಜುಲೈ 1 ರಂದು ಸಾವನ್ನಪ್ಪಿದ್ದರು.

7) ರೋಗಿ-13491: ಬಳ್ಳಾರಿಯ 75 ವರ್ಷದ ವೃದ್ಧೆ. ತೀವ್ರ ಉಸಿರಾಟದ ಸಮಸ್ಯೆ (ಐಎಲ್‍ಐ), ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಜೂನ್ 28 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

8) ರೋಗಿ-14357: ಉಡುಪಿಯ 48 ವರ್ಷದ ಪುರುಷ. ವಿಷಮ ತೀರ ಜ್ವರ (ಸಾರಿ)ದಿಂದ ಜೂನ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ದೀರ್ಘ ಕಾಲದ ಮದ್ಯವ್ಯಸನಿಗಳಿದ್ದ ಇವರನ್ನು ಜೂನ್ 15 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 28 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

9) ರೋಗಿ-14681: ಬಳ್ಳಾರಿಯ 74 ವರ್ಷದ ವೃದ್ಧ. ಉಸಿರಾಟದ ಸಮಸ್ಯೆ ಮತ್ತು ಜ್ವರದಿಂದ ಬಳಲುತ್ತಿದ್ದ ಇವರನ್ನು ಜೂನ್ 25 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

10) ರೋಗಿ-16222: ಬೆಂಗಳೂರಿನ 61 ವರ್ಷದ ವೃದ್ಧ. ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಜೂನ್ 30 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

11) ರೋಗಿ-16430: ಕೊಪ್ಪಳದ 50 ವರ್ಷದ ಪುರುಷ. ವಿಷಮ ಶೀತ ಜ್ವರ (ಸಾರಿ), ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜೂನ್ 30 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

12) ರೋಗಿ-16578: ಮೈಸೂರಿನ 70 ವರ್ಷದ ವೃದ್ಧೆ. ತೀವ್ರ ಉಸಿರಾಟದ ಸಮಸ್ಯೆ, ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದವರನ್ನು ಜೂನ್ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

13) ರೋಗಿ-16644: ಹಾಸನದ 65 ವರ್ಷದ ವೃದ್ಧ. ತೀವ್ರ ಉಸಿರಾಟದ ಸಮಸ್ಯೆ, ಮಧುಮೇಹ ಮತ್ತು ಅಸ್ತಮಾದಿಂದ ಬಳಲುತ್ತಿದ್ದವರನ್ನು ಜುಲೈ 1 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 2 ರಂದು ಸಾವನ್ನಪ್ಪಿದ್ದರು.

14) ರೋಗಿ-16699: ತುಮಕೂರಿನ 60 ವರ್ಷದ ವೃದ್ಧ. ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರು ಜೂನ್ 30 ರಂದು ನಿವಾಸದಲ್ಲಿ ಸಾವನ್ನಪ್ಪಿದ್ದರು.

15) ರೋಗಿ-16764: ಕಲಬುರಗಿಯ 36 ವರ್ಷದ ಪುರುಷ. ಬೆಂಗಳೂರಿನ ಪ್ರಯಾಣದ ಹಿನ್ನೆಲೆ. ವಿಷಮ ಶೀತ ಜ್ವರದಿಂದ ಬಳಲುತ್ತಿದ್ದವನ್ನು ಜೂನ್ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 30ರಂದು ಸಾವನ್ನಪ್ಪಿದ್ದರು.

16) ರೋಗಿ-16877: ಬಳ್ಳಾರಿಯ 55 ವರ್ಷದ ಪುರುಷ. ಸಾರಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜುಲೈ 1 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

17) ರೋಗಿ-16964: ಬೆಳಗಾವಿಯ 45 ವರ್ಷದ ಪುರುಷ. ಸಾರಿ, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜೂನ್ 30 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 1 ರಂದು ಸಾವನ್ನಪ್ಪಿದ್ದರು.

18) ರೋಗಿ-17020: ಉತ್ತರ ಕನ್ನಡದ 68 ವರ್ಷದ ವೃದ್ಧೆ. ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆ. ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 25 ರಂದು ಆಸ್ಪತ್ರೆಗೆ ದಾಖಲಾಗಿದ್ದವರು ಜೂನ್ 30 ರಂದು ಸಾವನ್ನಪ್ಪಿದ್ದರು.

19) ರೋಗಿ-17121: ದಕ್ಷಿಣ ಕನ್ನಡದ 31 ವರ್ಷದ ಪುರುಷ. ಸಾರಿ, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜೂನ್ 30 ರಂದು ಆಸ್ಪತ್ರೆಗೆ ದಾಖಲಸಲಾಗಿತ್ತು. ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

Share This Article
Leave a Comment

Leave a Reply

Your email address will not be published. Required fields are marked *