ರಾಯಚೂರು: ಕೊರೋನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 7 ಮಕ್ಕಳ ಕೋವಿಡ್ ಕೇರ್ ಸೆಂಟರ್ ತೆರೆಯಲು ಜಿಲ್ಲಾಡಳಿತ ಮುಂದಾಗಿದೆ.
ಜಿಲ್ಲೆಯಲ್ಲಿ ಮಕ್ಕಳಿಗಾಗಿಯೇ ಒಟ್ಟು 600 ಬೆಡ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಇದರಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ 60 ಸಿಐಸಿಯು ಬೆಡ್, 80 ಎನ್‍ಐಸಿಯು ಬೆಡ್ 200 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ರಿಮ್ಸ್ ನಲ್ಲಿ 8 ಜನ ಮಕ್ಕಳ ತಜ್ಞರಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 14 ಜನ ಮಕ್ಕಳ ತಜ್ಞರಿದ್ದು ಮೂರನೇ ಅಲೆ ಎದುರಿಸಲು ಸಜ್ಜಾಗಿದ್ದಾರೆ. ಮಕ್ಕಳಿಗೆ ವಾಕ್ಸಿನೇಷನ್ ಆಗದೇ ಇರುವುದರಿಂದ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಬಸ್ ಸಂಚಾರಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್
ಮೊದಲ ಅಲೆಯಲ್ಲಿ 250ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿತ್ತು. ಎರಡನೇ ಅಲೆಯಲ್ಲಿ ಟ್ಟು 2648 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಇದರಲ್ಲಿ 0 ರಿಂದ 5 ವರ್ಷದ 353 ಮಕ್ಕಳು, 6 ರಿಂದ 10 ವರ್ಷದ 539 ಮಕ್ಕಳು, 11 ರಿಂದ 15 ವರ್ಷದ 929 ಮಕ್ಕಳು, 16 ರಿಂದ 18 ವರ್ಷದ 807 ಮಕ್ಕಳಿಗೆ ಸೋಂಕು ತಗುಲಿದ್ದು ಇದರಲ್ಲಿ ಬಹುತೇಕರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಮಕ್ಕಳ ಸಾವು ಸಂಭವಿಸಿಲ್ಲ.