ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ದನ ಕಾಯುವರು ಅರಣ್ಯ ಪ್ರದೇಶಕ್ಕೆ ಹೋದಾಗ ದುರ್ವಾಸಣೆ ಬಂದಿರೋದನ್ನ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸುರ ಶೋಧ ನಡೆಸಿದಾಗ ಮಹಿಳೆ ಶವ ಪತ್ತೆಯಾಗಿದೆ. ಶವದ ಅಕ್ಕಪಕ್ಕಲಿ ಮದ್ಯ ಮತ್ತು ನೀರಿನ ಪೌಚ್ ಗಳು ಪತ್ತೆಯಾಗಿದ್ದು, ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ವಾರದ ಹಿಂದೆ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.