ಕೋವಿಡ್ ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ನೆರವು: ಕೆ.ಎಸ್.ಈಶ್ವರಪ್ಪ

Public TV
1 Min Read

ಶಿವಮೊಗ್ಗ: ಕೋವಿಡ್‍ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮಹಾನಗರ ಪಾಲಿಕೆ ವತಿಯಿಂದ ಕೊರೊನಾದಿಂದ ಸಂಕಷ್ಟಕ್ಕೆ ಈಡಾದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್‍ಗಳಲ್ಲಿ ಒಟ್ಟು 46460 ಆಹಾರ ಕಿಟ್ ನೀಡುವ ಮಹತ್ತರ ಕಾರ್ಯವನ್ನು ಕೈಗೊಳ್ಳಲಾಗಿದೆ. ಪ್ರತಿ ವಾರ್ಡ್‍ನಲ್ಲಿ ಒಂದು ಸಾವಿರಕ್ಕೂ ಅಧಿಕ ಕಿಟ್ ವಿತರಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ವ್ಯಕ್ತಿಯ ಮನೆ ಬಾಗಿಲಿಗೆ ಆಹಾರ ಕಿಟ್ ತಲುಪಿಸಲಾಗುತ್ತಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡಿರುವ ಈ ಕಾರ್ಯ ಇತರ ಸ್ಥಳೀಯ ಸಂಸ್ಥೆಗಳಿಗೂ ಮಾದರಿಯಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಎಂ.ವಿ. ಕೃಷ್ಣಪ್ಪ ಪತ್ನಿ ಪ್ರಮೀಳಮ್ಮ ನಿಧನ

ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಪ್ರಸನ್ನ ಕುಮಾರ್, ರುದ್ರೇಗೌಡ, ಮೇಯರ್ ಸುನೀತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಟಾರೆ,ಕಾರ್ಪೊರೇಟರ್‌ಗಳು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *