ಕೋವಿಡ್ ಸೋಂಕು ಹೆಚ್ಚಳದ ಮಧ್ಯೆ ಹೊನ್ನಾಳಿ ಕ್ಷೇತ್ರದಲ್ಲಿ ಅದ್ಧೂರಿ ಜಾತ್ರೆ

Public TV
1 Min Read

ದಾವಣಗೆರೆ: ದೇಶಾದ್ಯಂತ ಕೊರೊನಾ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಜನ ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೊನ್ನಾಳಿ ಕ್ಷೇತ್ರದ ಕ್ಯಾಸಿನಕೆರೆ ಗ್ರಾಮದಲ್ಲಿ ಅದ್ಧೂರಿಯಾಗಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ನಡೆಸಲಾಗಿದೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ಕೊರೊನಾ ನಿಯಮಾವಳಿ ಉಲ್ಲಂಘಿಸಿ ಜಾತ್ರೆ ಮಾಡಲಾಗಿದ್ದು, ನೂರಾರು ಭಕ್ತರು ಸೇರಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಂತೆ ಸರ್ಕಾರದ ಆದೇಶವಿದ್ದರೂ, ಡೋಂಟ್ ಕೇರ್ ಎನ್ನುವಂತೆ ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ಜನ ರಥೋತ್ಸವ ಮಾಡಿದ್ದಾರೆ. ಹೀಗಾಗಿ ಜನರಲ್ಲಿ ಕೊರೊನಾ ಹರಡುವ ಭೀತಿ ಎದುರಾಗಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಸಹ ಭಾರೀ ಪ್ರಮಾಣದಲ್ಲಿ ಸೋಂಕು ಪತ್ತೆಯಾಗುತ್ತಿದೆ. ಜನ ಆಕ್ಸಿಜನ್ ಕೊರತೆಯಿಂದ ನರಳುತ್ತಿದ್ದಾರೆ. ಇಷ್ಟಾದರೂ ನೂರಾರು ಜನ ಸೇರಿ ಜಾತ್ರೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *