ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಕೋವಿಡ್ ಲಸಿಕೆ ನೀಡುವಂತೆ ಯುವ ಕಾಂಗ್ರೆಸ್ ಆಗ್ರಹ

Public TV
1 Min Read

ಶಿವಮೊಗ್ಗ: ಕೊರೊನಾ ಸೋಂಕಿಗೆ ರಾಮಬಾಣ ಆಗಿರುವ ಕೋವಿಡ್ ಲಸಿಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗದೇ ಜನರು ಪರದಾಡುತ್ತಿದ್ದಾರೆ. ಲಸಿಕೆ ಪಡೆಯುವ ಸಲುವಾಗಿ ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಹೀಗಿರುವಾಗ ಖಾಸಗಿ ಆಸ್ಪತ್ರೆಗಳು ಮಾತ್ರ ಜನರಿಂದ ಹಣ ಸುಲಿಗೆ ಮಾಡಿ ವ್ಯಾಕ್ಸಿನ್ ನೀಡುತ್ತಿವೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ವ್ಯಾಕ್ಸಿನ್, ಖಾಸಗಿ ಆಸ್ಪತ್ರೆಗಳಿಗೆ ಸಿಗುತ್ತಿರೋದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಶೀಘ್ರವೇ ಜಿಲ್ಲಾಡಳಿತ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ವ್ಯಾಕ್ಸಿನ್ ನೀಡಲು ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ ಸರ್ಕಾರಿ ಆಸ್ಪತ್ರೆಗಳಿಗೆ ಸಿಗದ ವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗಳಿಗೆ ಹೇಗೆ ಪೂರೈಕೆ ಆಗುತ್ತಿದೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *