ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶ ತಂದಿರುವ ಕ್ರಮ ಸ್ವಾಗತಿಸುತ್ತೇನೆ: ಈಶ್ವರಪ್ಪ

Public TV
1 Min Read

– ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇವೆ

ಶಿವಮೊಗ್ಗ: ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶದಲ್ಲಿ ಜಾರಿಗೆ ತರಲು ಹೊರಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ:  ಗಾಳಿಯ ಗುಣಮಟ್ಟ ಹೆಚ್ಚಿಸಲು 6 ವಾಹನ ಖರೀದಿಗೆ ಮುಂದಾದ ಬಿಬಿಎಂಪಿ

ಶಿವಮೊಗ್ಗದಲ್ಲಿ ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಣದ ಸಲುವಾಗಿ ಕುಟುಂಬಕ್ಕೆ ಇಬ್ಬರೇ ಮಕ್ಕಳು ಎಂಬ ನಿಯಮ ತಂದಿದ್ದಾರೆ. ದೇಶದಲ್ಲಿ ಸಹ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನಸಂಖ್ಯೆ ಕಡಿಮೆ ಮಾಡಲು ಕೇಂದ್ರ ಸರಕಾರ ಸಹ ಬಹಳ ಪ್ರಯತ್ನ ನಡೆಸುತ್ತಿದೆ ಆದರೂ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆ, ಸರ್ಕಾರಿ ಕೆಲಸ, ಸಬ್ಸಿಡಿಗೆ ಅನರ್ಹ – ಯುಪಿ ಮಸೂದೆ

ಉತ್ತರಪ್ರದೇಶ ಒಂದು ಪ್ರಯತ್ನ ನಡೆಸಿದೆ. ಆ ಪ್ರಯತ್ನ ಹೇಗೆ ಫಲಪ್ರದವಾಗುತ್ತದೆ ಎಂಬುದನ್ನು ನೋಡುತ್ತೇವೆ. ಆ ಅನುಭವದ ಮೇಲೆ ರಾಜ್ಯದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಿ ರಾಜ್ಯದಲ್ಲೂ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:  ಕೆಂಪೇಗೌಡರ ಪುತ್ಥಳಿ ಕಾರ್ಯ- ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಪರಿಶೀಲನೆ

2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವುದು, ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕುವುದು, ಸರ್ಕಾರಿ ಉದ್ಯೋಗದಲ್ಲಿದ್ದರೆ ಮುಂಬಡ್ತಿ ಸೇರಿದಂತೆ ಸಬ್ಸಿಡಿಗೂ ಅನರ್ಹರಾಗುತ್ತಾರೆ ಎಂಬ ಅಂಶ ಈ ಮಸೂದೆಯಲ್ಲಿದೆ. ಇದೇ ರೀತಿ ಎರಡು ಅಥವಾ ಒಂದು ಮಗುವನ್ನು ಹೊಂದಿದ್ದರೆ ಅವರಿಗೆ ಭರಪೂರ ಸೌಲಭ್ಯವನ್ನು ಈ ಕಾನೂನಿನ ಅಡಿಯಲ್ಲಿ ನೀಡಲಾಗುತ್ತದೆ. ಇಂತಹ ಮಹತ್ವದ ಮಸೂದೆಯನ್ನು ಯುಪಿ ಸರ್ಕಾರ ಸಿದ್ಧಪಡಿಸಿದೆ. ಇಂತಹದ್ದೊಂದು ಹೊಸ ಮಸೂದೆಯನ್ನು ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸುವ ಕುರಿತು ಪ್ರಸ್ತಾವನೆ ಮುಂದಿಟ್ಟಿದೆ. ಉತ್ತರ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕರಡು ಪ್ರತಿಯನ್ನು ಸಿದ್ಧಪಡಿಸಿದ್ದು, ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೇ-4ರ ಅಂಕಿ ಅಂಶಗಳನ್ನು ಆಧರಿಸಿ ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *