ಡಿವೈಎಸ್‍ಪಿ ಲಕ್ಷ್ಮಿ ಅಂತಿಮ ದರ್ಶನಕ್ಕೆ ಜನಸಾಗರ- ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

Public TV
1 Min Read

ಕೋಲಾರ: ಸಿಐಡಿ ಡಿವೈಎಸ್‍ಪಿ ಲಕ್ಷ್ಮಿ ಅಂತಿಮ ಸಂಸ್ಕಾರವನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಸ್ವಗ್ರಾಮದಲ್ಲಿ ನೆರವೇರಿಸಲಾಯಿತು.

ಜಿಲ್ಲೆಯ ಮಾಲೂರು ತಾಲೂಕಿನ ಸ್ವಗ್ರಾಮ ತುರುವಾಲಟ್ಟಿಯ ಹೊರವಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಲಕ್ಷ್ಮಿ ಸಂಬಂಧಿಕರು, ಗ್ರಾಮಸ್ಥರು, ಪೊಲೀಸ್ ಇಲಾಖೆ ಅಧಿಕಾರಿಗಳು ಅಂತಿಮ ದರ್ಶನದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಗ್ರಾಮದ ನೂರಾರು ಜನ ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ಇದೇ ವೇಳೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು.

ಕೋಲಾರ ಎಸ್‍ಪಿ ಕಾರ್ತಿಕ್ ರೆಡ್ಡಿ, ಎಎಸ್‍ಪಿ ಜಾಹ್ನವಿ ಸಹ ಅಂತಿಮ ದರ್ಶನ ಪಡೆದರು. ಬಳಿಕ ಪತಿ ನವೀನ್ ಹಾಗೂ ತಂದೆ ವೆಂಕಟೇಶಪ್ಪ ಅವರಿಗೆ ಸಮಾಧಾನಪಡಿಸಿದರು. ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಲಕ್ಷ್ಮಿ ಅವರ ಪತಿ ನವೀನ್ ಅಂತಿಮ ವಿಧಿ ವಿಧಾನ ನೆರವೇರಿಸಿದರು. ಕೋಲಾರ ಪೊಲೀಸರು ಮೂರು ಸುತ್ತು ಕುಶಾಲು ತೋಪು ಸಿಡಿಸಿ ಗೌರವ ಸಲ್ಲಿಸಿದರು. ನೂರಾರು ಗ್ರಾಮಸ್ಥರು ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದರು.

ಲಕ್ಷ್ಮಿ ಬೆಂಗಳೂರಿನ ತನ್ನ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಇವರ ಆತ್ಮಹತ್ಯೆಯ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಕೌಟುಂಬಿಕ ಸಮಸ್ಯೆ ಇರಲಿಲ್ಲ ಎಂದು ಅವರ ಮನೆಯವರು ತಿಳಿಸಿದ್ದಾರೆ. ಆದರೆ ಸತ್ಯಾಸತ್ಯತೆ ತನಿಖೆ ಬಳಿಕವೇ ತಿಳಿಯಬೇಕಿದೆ. 8 ವರ್ಷದ ಹಿಂದೆ ಲಕ್ಷ್ಮಿ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಪೋಷಕರಿಂದ ದೂರ ಇದ್ದ ಲಕ್ಷ್ಮಿ, ಬೆಂಗಳೂರಿನಲ್ಲಿ ವಾಸವಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *