ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಲಿಂಬಚಿಯಾ ಅವರನ್ನು ಬೆಳಗಿನಿಂದ ಎನ್‍ಸಿಬಿ ವಿಚಾರಣೆ ನಡೆಸಿದ್ದು, ಇದೀಗ ಇಬ್ಬರನ್ನೂ ಬಂಧಿಸಿದೆ.
ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿದ್ದ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಇಂದು ಬೆಳಗ್ಗೆ ಅಂಧೇರಿಯ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ದಾಳಿ ನಡೆಸಿತ್ತು. ಇದೀಗ ಭಾರತಿ ಹಾಗೂ ಹರ್ಷ್ ಅವರನ್ನು ಬಂಧಿಸಲಾಗಿದೆ. ದಾಳಿ ವೇಳೆ ಅವರ ಮನೆಯಲ್ಲಿ ಅಲ್ಪ ಪ್ರಮಾಣದ ಗಾಂಜಾ ಕೂಡ ವಶಪಡಿಸಿಕೊಳ್ಳಲಾಗಿದೆ.
Maharashtra: Comedian Bharti Singh and her husband Harsh Limbachiyaa arrive at Narcotics Control Bureau (NCB) office in Mumbai.
NCB conducted raid at their residence, earlier today. pic.twitter.com/7nVuUKdq23
— ANI (@ANI) November 21, 2020
ಎನ್‍ಸಿಬಿ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೇಡೆ ನೇತೃತ್ವದ ತಂಡ ದಾಳಿ ನಡೆಸಿದ್ದು, ಭಾರತಿ ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಿ ಹುಡುಕಾಟ ನಡೆಸಿತ್ತು. ಈ ವೇಳೆ ಮನೆಯಲ್ಲಿ ಅಲ್ಪ ಪ್ರಮಾಣದ ಗಾಂಜಾವನ್ನು ಸಹ ವಶಪಡಿಸಿಕೊಳ್ಳಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಭಾರತಿ ಸಿಂಗ್ ಮನೆ ಮಾತ್ರವಲ್ಲದೆ ಇನ್ನೂ ಎರಡು ಕಡೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್‍ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಸಹ ಎನ್‍ಸಿಬಿ ವಿಚಾರಣೆಯನ್ನ ಎದುರಿಸಿದ್ದಾರೆ.
ಕೆಲ ದಿನಗಳ ಹಿಂದೆ ನಟ ಅರ್ಜುನ್ ರಾಂಪಾಲ್ ಸಹ ಎನ್‍ಸಿಬಿ ಮುಂದೆ ಹಾಜರಾಗಿದ್ದರು. ನವೆಂಬರ್ 11 ಮತ್ತು 12ರಂದು ಎನ್‍ಸಿಬಿ ಅಧಿಕಾರಿಗಳ ಮುಂದೆ ರಾಂಪಾಲ್ ಗೆಳತಿ ಗ್ಯಾಬ್ರಿಯೆಲಾ ಸಹ ಹಾಜರಾಗಿದ್ದರು.