ಡ್ರಗ್ ಡೀಲರ್ ಅನಿಕಾಳಿಗಿವೆ ಮೂರು ನೇಮ್ – ಫುಲ್ ಡಿಟೇಲ್ಸ್ ಕಲೆಹಾಕಿದ ಎನ್‍ಸಿಬಿ

Public TV
1 Min Read

– ತಮಿಳುನಾಡು ಮೂಲದ ಅನಿಕಾ

ಬೆಂಗಳೂರು: ಡ್ರಗ್ ಡೀಲರ್ ಅನಿಕಾ ಬಗ್ಗೆ ಎನ್‍ಸಿಬಿ ಅಧಿಕಾರಿಗಳು ಫುಲ್ ಡಿಟೇಲ್ಸ್ ಕಲೆಹಾಕಿದ್ದು, ಆಕೆ ತಮಿಳುನಾಡು ಮೂಲದವಳು ಎಂದು ತಿಳಿದು ಬಂದಿದೆ.

ಕಳೆದ ಗುರುವಾರ ಎನ್‍ಸಿಬಿ ಅಧಿಕಾರಿಗಳು ಹೈಟೆಕ್ ಡ್ರಗ್ ದಂಧೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದರು. ಇವರು ದೊಡ್ಡ ಶ್ರೀಮಂತರು, ಸಿನಿಮಾ ನಟ-ನಟಿಯರಿಗೆ ಡ್ರಗ್ ಸಪ್ಲೇ ಮಾಡುತ್ತಿದ್ದರು ಎಂಬ ಮಾಹಿತಿ ಹೊರಬಂದಿತ್ತು. ಈಗ ಅದರಲ್ಲಿ ಬಂಧಿತಳಾದ ಲೇಡಿ ಕಿಂಗ್‍ಪಿನ್ ಅನಿಕಾಳ ಪೂರ್ತಿ ಮಾಹಿತಿಯನ್ನು ಎನ್‍ಸಿಬಿ ಅಧಿಕಾರಿಗಳು ಕಲೆಹಾಕಿದ್ದಾರೆ.

ಲೇಡಿ ಡ್ರಗ್ ಡೀಲರ್ ನಿಜವಾದ ಹೆಸರು ಅನಿಕಾ, ಆದರೆ ಇವಳು ಮೂರು ನಕಲಿ ನೇಮ್‍ಗಳನ್ನು ಇಟ್ಟುಕೊಂಡಿದ್ದಳು. ಅನಿಕಾ ಡಿ, ಅನಿ ಮತ್ತು ಬಿಮನಿ ಎಂಬ ಮೂರು ಹೆಸರಿನಿಂದ ಪರಿಚಯಿಸಿಕೊಂಡು ಡ್ರಗ್ ಡೀಲ್ ಮಾಡುತ್ತಿದ್ದಳು. ಈಕೆ ಸಾಮಾಜಿಕ ಜಾಲತಾಣದಲ್ಲಿ ಬಿಮನಿ ಎಂಬ ಹೆಸರು ಬಳಸುತ್ತಿದ್ದಳು ಎಂಬ ಮಾಹಿತಿ ಲಭಿಸಿದೆ. ಜೊತೆಗೆ ಈಕೆ ತಮಿಳುನಾಡಿನವಳಾಗಿದ್ದು, 24 ವರ್ಷ ವಯಸ್ಸಿನವಳಾಗಿದ್ದಾಳೆ.

ಅನಿಕಾ ತಮಿಳುನಾಡಿನ ಸೇಲಂ ಸಮೀಪದ ಯರ್ಕಾಡ್ ಮೂಲದವಳು. ಅನಿಕಾ ತಂದೆ ದಿನೇಶ್‍ಗೆ ಮೂವರು ಮಕ್ಕಳಿದ್ದು, ಅನಿಕಾಳೇ ದೊಡ್ಡವಳು. ಅನಿಕಾಗೆ ಒಬ್ಬಳು ತಂಗಿ, ಒಬ್ಬ ತಮ್ಮ ಇದ್ದು ತಮಿಳುನಾಡಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅನಿಕಾ ಯರ್ಕಾಡ್‍ನ ಶೆವ್ರಾಯ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಹೋಟೆಲ್ ಮ್ಯಾನೇಜ್‍ಮೆಂಟ್ ಡಿಗ್ರಿಯ ಎರಡನೇ ವರ್ಷದಲ್ಲಿ ಫೇಲ್ ಆಗಿ ವಿದ್ಯಾಭ್ಯಾಸವನ್ನು ಬಿಟ್ಟಿದ್ದಾಳೆ ಎನ್ನಲಾಗಿದೆ.

ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಅನಿಕಾ, ಕೆಲಸ ಸಿಗದೇ ಡ್ರಗ್ ಜಾಲ ಸೇರಿಕೊಂಡಳು. ನಗರದ ದೊಡ್ಡಗುಬ್ಬಿಯಲ್ಲಿ ಐಶ್ವರ್ಯ ನಿಲಯದಲ್ಲಿ ವಾಸವಾಗಿದ್ದು, ಇಲ್ಲಿಂದಲೇ ಡ್ರಗ್ ದಂಧೆ ನಡೆಸುತ್ತಿದ್ದಳು. ಮುಂಬೈನ ಡ್ರಗ್ ಪೆಡ್ಲರ್ ಕೊಟ್ಟ ಮಾಹಿತಿ ಮೇರೆಗೆ ಈಕೆ ಮನೆಯ ಮೇಲೆ ದಾಳಿ ಮಾಡಿದಾಗ, ಎಂಡಿಎಂಎ ಎಂಬ ಮಾದಕ ವಸ್ತು ಸಮೇತ ಸಿಕ್ಕಿಬಿದ್ದು ಅರೆಸ್ಟ್ ಆಗಿದ್ದಾಳೆ.

Share This Article
Leave a Comment

Leave a Reply

Your email address will not be published. Required fields are marked *