ನೆಲಮಂಗಲ: ರಾಮ ಮಂದಿರಕ್ಕೆ ಹಣ ಸಂಗ್ರಹ ಮಾಡುತ್ತೀರುವ ಕುರಿತು ಹೇಳಿಕೆ ನೀಡಿ ತೀವ್ರ ಚರ್ಚೆಗೆ ಗುರಿಯಾಗಿರುವ ಮಾಜಿ ಮುಖ್ಯಮಂತ್ರಿ ಅವರ ಹೇಳಿಕೆಯನ್ನು ಅವರ ಮಗ ನಿಖಿಲ್ ಕುಮಾರ ಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.
ನೆಲಮಂಗಲದ ಮರಳಕುಂಟೆಯಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ನಿಖಿಲ್ ಕುಮಾರಸ್ವಾಮಿ, ಈಗಾಗಲೇ ರಾಮಮಂದಿರ ದೇಣಿಗೆ ಸಂಗ್ರಹಿಸುವ ವಿಚಾರ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ವಿಷಯದ ಕುರಿತು ಮಾತನಾಡುವ ಮೊದಲು ಕುಮಾರಸ್ವಾಮಿ ಅಳೆದು ತೂಗಿ ಮಾತನಾಡುವ ವ್ಯಕ್ತಿ ಎನ್ನುವ ಮೂಲಕ ಅವರು ಕೊಟ್ಟಿರುವ ಹೇಳಿಕೆಗೆ ಸಮಾಜಾಯಿಸಿ ನೀಡಿದ್ದಾರೆ.
ಕುಮಾರಸ್ವಾಮಿ ಈ ಮೊದಲು ರಾಮನ ಹೆಸರಲ್ಲಿ ಪಾರದರ್ಶಕತೆ ಇಲ್ಲದೆ ಹಣ ಲೂಟಿ ಮಾಡುತ್ತಿದ್ದಾರೆ. ರಾಮ ಮಂದಿರ ಕಟ್ಟುತ್ತೇವೆ ಎಂದು ಹಣ ದುರಪಯೋಗ ಮಾಡುತ್ತಿದ್ದಾರೆ. ದುರುಪಯೋಗ ಮಾಡುತ್ತಿರುವುದಕ್ಕೆ ನನ್ನ ವಿರೋಧ ಇದೆ. ರಾಮನಿಗೆ ಅವಮಾನ ಮಾಡುವ ಪದವನ್ನು ನಾನು ಮಾತಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.