ಹಾವೇರಿ: ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಗಂಭೀರ ಗಾಯಗೊಂಡು, ಓರ್ವ ಕ್ರೂಸರ್ ನಲ್ಲಿ ಸಿಕ್ಕು ಪರದಾಡಿದ ಘಟನೆಹಾವೇರಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದೆ.
ಕ್ರೂಸರ್ ವಾಹನದಲ್ಲಿ ಸಿಲುಕಿ ಪಾರದಾಡುತ್ತಿದ್ದ ವ್ಯಕ್ತಿಯನ್ನ ಸತೀಶ್ ಕಾಸರಕರ (43) ಎಂದು ಗುರುತಿಸಲಾಗಿದೆ. ಕ್ರೂಸರ್ ನಲ್ಲಿ ಕಾಲು ಸಿಲುಕಿದ್ದರಿಂದ ಸತೀಶ್ ಅವರನ್ನ ಹೊರತೆಗೆಯಲು 108 ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ಈ ವೇಳೆ ದುರ್ಘಟನೆ ನಡೆದಿದೆ. ಹಾವೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.