ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 147 ಜನರಿಗೆ ಸೋಂಕು

Public TV
2 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹೇಗೆ?
* ಉಳ್ಳಾಲ ಸಮುದಾಯಿಕ ಪರೀಕ್ಷೆಯಲ್ಲಿ 48 ಮಂದಿಗೆ ಪಾಸಿಟಿವ್
* ಐಎಲ್‍ಐ 40 ಮಂದಿಗೆ ಕೊರೊನಾ ಪಾಸಿಟಿವ್.
* ಪ್ರಾಥಮಿಕ ಸಂಪರ್ಕದಿಂದ 35 ಜನರಿಗೆ ಸೋಂಕು.
* ಅಂತರಾಷ್ಟ್ರೀಯ ಪ್ರಯಾಣದಿಂದ 8 ಮಂದಿಗೆ ಪಾಸಿಟಿವ್.
* ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಪಾಸಿಟಿವ್.
* ಸಾರಿಯಿಂದ ಇಬ್ಬರಿಗೆ ಸೋಂಕು
* ಕೋವಿಡ್ ಆಸ್ಪತ್ರೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್.
* ಮಲೇಷಿಯಾದಿಂದ ಹಡಗಿನಲ್ಲಿ ಬಂದ ಇಬ್ಬರಿಗೆ ಸೋಂಕು ದೃಢ.
* ಶಸ್ತ್ರ ಚಿಕಿತ್ಸೆಯ ಮೊದಲು ಮಾಡಿದ ಟೆಸ್ಟ್ ನಿಂದ ಒಬ್ಬರಿಗೆ ಸೋಂಕು ದೃಢ.
* ಹೆರಿಗೆಯ ಸಂದರ್ಭ ಮಾಡಿದ ಟೆಸ್ಟ್ ನಿಂದ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್.
* ಸಂಪರ್ಕವೇ ಪತ್ತೆಯಾಗದ ಕೇಸ್ ಪತ್ತೆ ಓರ್ವ ವ್ಯಕ್ತಿಗೆ ಕೊರೊನಾ ಪಾಸಿಟಿವ್.

ಕೊರೊನಾ ಸೋಂಕು ಹೆಚ್ಚಳಕ್ಕೆ ಪ್ರಾಥಮಿಕ ಸಂಪರ್ಕವೇ ಅಧಿಕ ಪ್ರಮಾಣದಲ್ಲಿ ಕಾರಣವಾಗಿದೆ. ಅದನ್ನು ಹೊರತುಪಡಿಸಿದರೆ ಉಲ್ಲಾಳದ ಸಮುದಾಯಿಕ ಪರೀಕ್ಷೆಯಲ್ಲಿ ಅಧಿಕ ಜನರಿಗೆ ಕೊರೊನಾ ಪಾಸಿಟಿವ್ ಉಂಟಾಗುತ್ತಿದೆ. ಇನ್ನು ಈ ನಡುವೆ ಆತಂಕದ ವಿಚಾರ ಅಂದ್ರೆ ಮಂಗಳೂರಿನ ಆಸ್ಪತ್ರೆಯಿಂದ ಸೋಂಕಿತನೊಬ್ಬ ಎಸ್ಕೇಪ್ ಆಗಿದ್ದಾನೆ. ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್- 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಈತನಿಗೆ ಕೋವಿಡ್ 19 ದೃಢ ಪಟ್ಟಿದೆ. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ.

ಆರೋಪಿತ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ದರ್ಬೆ ನಿವಾಸಿಯಾಗಿದ್ದು, ಮಂಗಳೂರಿನ ಅಜ್ಜಿ ಮನೆಯಲ್ಲಿ ವಾಸ್ತವ್ಯವಿದ್ದ 18 ವರ್ಷದ ದೇವರಾಜು. ಈತನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದರೆ ಮತ್ತು ಎಲ್ಲಿಯಾದರೂ ಕಂಡು ಬಂದರೆ ನಗರ ಪೊಲೀಸ್ ಕಂಟ್ರೋಲ್ ನಂಬರ್ 9480802300 ಹಾಗೂ ಪಾಂಡೇಶ್ವರ ಪೊಲೀಸ್ ಠಾಣಾ 0824-2220530 ಈ ನಂಬರ್ ಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಪ್ರಕರಣ ಇಳಿಮುಖವಾಗಿಸಲು ಜಿಲ್ಲಾಡಳಿತ ಇನ್ನೂ ಹೆಚ್ಚು ಕ್ರಮಗಳನ್ನು ಕೈಗೊಳ್ಳಬೇಕಿದೆ. ಪೊಲೀಸ್ ಇಲಾಖೆ ಇನ್ನೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕಾಗಿದೆ. ಇದಾಗದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯಕ್ಕೆ ಸೋಂಕು ಹರಡುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *