ದರ್ಶನ್ ದಂಪತಿಗೆ 17ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

Public TV
1 Min Read

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿಗೆ ಮೇ 19 ಮಹತ್ವದ ದಿನವಾಗಿದ್ದು, ಈ ವಿಶೇಷ ದಿನವನ್ನು ಸಂಭ್ರಮದಿಂದ ಆಚರಿಸಬೇಕಿತ್ತು. ಆದರೆ ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲೇ ಕಾಲ ಕಳೆಯುವಂತಾಗಿದೆ.

ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿಗೆ ಇಂದು ಮರೆಯಲಾಗದ ದಿನ. ಸ್ಯಾಂಡಲ್‍ವುಡ್‍ನ ಈ ಜೋಡಿ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಅಲ್ಲದೆ ಡಿ ಬಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಕೋರುತ್ತಿದ್ದು, ಈ ಮೂಲಕ ದೂರದಿಂದಲೇ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಡಿ ಬಾಸ್ ಹಾಗೂ ವಿಜಯಲಕ್ಷ್ಮಿ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಇಂದಿಗೆ 17 ವರ್ಷಗಳಾಗಿದ್ದು, ಇಂದು 17ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2003ರಲ್ಲಿ ಈ ದಂಪತಿ ಹಸೆಮಣೆ ಏರಿದ್ದು, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 17 ವರ್ಷಗಳಾಗಿವೆ. ದರ್ಶನ್ ಮತ್ತು ವಿಜಯಲಕ್ಷ್ಮಿ ಅವರು ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಡಿ ಬಾಸ್ ಹಾಗೂ ವಿಜಯಲಕ್ಷ್ಮಿಯವರ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಮಂಜುನಾಥ ಸ್ವಾಮಿಯ ದೇವಸ್ಥಾನದಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಿನಿ ತಾರೆಯರ ಸಮ್ಮುಖದಲ್ಲಿ ನಡೆದಿತ್ತು. ಪುತ್ರ ವಿನೀಶ್ ಸಹ ದರ್ಶನ್ ಅಭಿನಯದ ಐರಾವತ ಹಾಗೂ ಯಜಮಾನ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಹೊರಗಡೆ ಸುತ್ತಾಟ ನಡೆಸಿದ್ದ, ಡಿ ಬಾಸ್ ದಂಪತಿ ಪಾರ್ಕ್ ನಲ್ಲಿ ಕಾಣಿಸಿಕೊಂಡಿದ್ದರು, ಇದನ್ನು ಅವರ ಅಭಿಮಾನಿ ವಿಡಿಯೋ ಮಾಡಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿತ್ತು.

ಸ್ನೇಹಿತರು, ಕುಟುಂಬಸ್ಥರು ಸಹ ದರ್ಶನ್ ದಂಪತಿಗೆ ಕರೆ ಹಾಗೂ ಮೆಸೇಜ್‍ಗಳ ಮೂಲಕ ಹಾರೈಸುತ್ತಿದ್ದಾರೆ. ಅಲ್ಲದೆ ತಮ್ಮ ನೆಚ್ಚಿನ ನಟನ ವಿವಾಹ ವಾರ್ಷಿಕೋತ್ಸವಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲೇ ಶುಭ ಕೋರುತ್ತಿದ್ದು, ಟ್ವಿಟ್ಟರ್, ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್‍ಗಳಲ್ಲಿ ಪೋಸ್ಟ್ ಹಾಕುವ ಮೂಲಕ ಶುಭಾಶಯ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *