ದೂದ್ ಗಂಗಾ ಯೋಜನೆ -ಬಿಎಸ್‍ವೈ ಮಹತ್ವದ ಚರ್ಚೆ

Public TV
1 Min Read

ಬೆಂಗಳೂರೂ: ದೂದ್ ಗಂಗಾ ಯೋಜನೆ ಪೂರ್ಣಗೊಳಿಸುವ ಸಂಬಂಧ ಸಿಎಂ ಯಡಿಯೂರಪ್ಪ ಮತ್ತು ಮಹಾರಾಷ್ಟ್ರ ಜಲಸಂಪನ್ಮೂಲ ಮಹತ್ವದ ಚರ್ಚೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಚಾಂಪಿಯನ್ ಓಟಗಾರ ಮಿಲ್ಕಾ ಸಿಂಗ್ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

1. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ ನಡೆಯಿತು. ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆಯಲ್ಲಿ ಕೆಲವು ವಿಚಾರಗಳ ಕುರಿತಾಗಿ ಚರ್ಚಿಸಲಾಯಿತ್ತು.

2. ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

3. ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

4. ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ ತಳಹಂತದ ಅಧಿಕಾರಿಗಳ ನಡುವೆ ಉತ್ತಮ ಸಂವಹನ, ಸಮನ್ವಯ ನಿರ್ವಹಿಸಲು ತೀರ್ಮಾನಿಸಲಾಯಿತು.

5. ಎರಡೂ ರಾಜ್ಯಗಳ ನಡುವೆ ಮಳೆಯ ಪ್ರಮಾಣ, ಜಲಾಶಯಗಳಿಂದ ನೀರು ಬಿಡುಗಡೆ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ಹಂಚಿಕೊಳ್ಳಲು ತೀರ್ಮಾನಿಸಲಾಯಿತು.

6. ದೂಧ್ ಗಂಗಾ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಒಪ್ಪಿಕೊಂಡಿದೆ. ಇದರಿಂದ ಈ ಭಾಗದ ಜನರ ನೀರಾವರಿ ಸೌಲಭ್ಯ ಹೊಂದುವ ಆಕಾಂಕ್ಷೆ ನೆರವೇರಲಿದೆ.

7. ಇದರೊಂದಿಗೆ ಬೇಸಿಗೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ 4 ಟಿಎಂಸಿ ನೀರು ಹಾಗೂ ಮಳೆಗಾಲದಲ್ಲಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಅಷ್ಟೇ ಪ್ರಮಾಣದ ನೀರು ಒದಗಿಸುವ ಬಗ್ಗೆ ತಾಂತ್ರಿಕ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *