ದೇಶದಲ್ಲಿ ಇಂದು ದಾಖಲೆಯ 16,922 ಮಂದಿಗೆ ಕೊರೊನಾ- 418 ಸಾವು

Public TV
1 Min Read

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಭಾರೀ ಏರಿಕೆಯಾಗುತ್ತಿದ್ದು, ಆತಂಕ ಸೃಷ್ಟಿಸುತ್ತಿದೆ. ನಿನ್ನೆಗಿಂತ ಇವತ್ತು ಹೆಚ್ಚು, ಇಂದಿಗಿಂತ ನಾಳೆ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇಂದಿನ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,922 ಮಂದಿಗೆ ಸೋಂಕು ದೃಢಪಟ್ಟಿದ್ದು, 418 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4.7 ಲಕ್ಷ ಗಡಿ ದಾಟಿದೆ.

ದೇಶದಲ್ಲಿ ಈವರೆಗೂ ಒಟ್ಟು 4,73,105 ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 1,86,514 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 2,71,697 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಚಾರ್ಜ್ ಆದರೆ, 14,894 ಜನ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಭಾರತದಲ್ಲಿ ಈವರೆಗೆ ಶೇ.57.43ರಷ್ಟು ರೋಗಿಗಳು ಕೋವಿಡ್-19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 1,42,900 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ನಂತರದ ಸ್ಥಾನದಲ್ಲಿ ದೆಹಲಿ (70,390 ಜನ), ತಮಿಳುನಾಡು (67,468 ಮಂದಿ), ಗುಜರಾತ್ (28,943 ಜನ), ಉತ್ತರ ಪ್ರದೇಶ (19,557 ಮಂದಿ), ರಾಜಸ್ಥಾನ (16,009 ಮಂದಿ), ಪಶ್ಚಿಮ ಬಂಗಾಳ (15,173 ಜನ) ಮತ್ತು ಮಧ್ಯಪ್ರದೇಶ (12,448 ಜನ) ಇದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *