ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ತಗುಲಿದ್ದ 5 ಲಕ್ಷ ಜನರು ಗುಣಮುಖರಾಗಿದ್ದಾರೆ. ಪ್ರತಿದಿನ ಕೊರೊನಾ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ.
ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ, ಇವತ್ತಿನವರೆಗೆ 5,15,385 ಮಂದಿ ಗುಣಮುಖವಾಗಿದ್ದಾರೆ. ಸದ್ಯ ದೇಶದಲ್ಲಿ 2.31,978 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಗುಣಮುಖರಾಗುತ್ತಿರುವ ಶೇಕಡಾ ದರ 62.78ರಷ್ಟಿದೆ.
ದೇಶದಲ್ಲಿ ಒಂದೇ ದಿನ 27,114 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 8 ಲಕ್ಷದ ಗಡಿ ದಾಟಿದೆ. ನಾಲ್ಕು ದಿನಗಳ ಹಿಂದೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಳು ಲಕ್ಷದ ಆಸುಪಾಸಿನಲ್ಲಿತ್ತು. ಇಂದು ಒಟ್ಟು ಸೋಂಕಿತರ ಸಂಖ್ಯೆ 8,20,916ಕ್ಕೇರಿಕೆಯಾಗಿದ್ದು, 24 ಗಂಟೆಯಲ್ಲಿ ಒಟ್ಟು 519 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಮೃತರ ಸಂಖ್ಯೆ 22,123 ಆಗಿದೆ.