ದೇಶದಲ್ಲಿ 67 ಲಕ್ಷದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Public TV
1 Min Read

-72,049 ಮಂದಿಗೆ ಸೋಂಕು-986 ಸಾವು

ನವದೆಹಲಿ: ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 67 ಲಕ್ಷದ ಗಡಿಯನ್ನು ದಾಟಿದೆ. ಕಳೆದ 24 ಗಂಟೆಯಲ್ಲಿ 72,049 ಮಂದಿಗೆ ಸೋಂಕು ತಗುಲಿದ್ದು, 986 ಸೋಂಕಿತರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದೆ. ಕೊರೊನಾಗೆ ಇದುವರೆಗೂ 1,04,555 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಇದುವರೆಗೂ 8,22,71,657 ಮಂದಿ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಮಹಾರಾಷ್ಟ್ರ (14,65,911), ಆಂಧ್ರ ಪ್ರದೇಶ (7,29,307), ಕರ್ನಾಟಕ (6,57,705), ತಮಿಳುನಾಡು(6,30,408) ಮತ್ತು ಉತ್ತರ ಪ್ರದೇಶ (4,20,937) ಕೊರೊನಾ ಪೀಡಿತ ರಾಜ್ಯಗಳ ಪೈಕಿ ಮೊದಲ ಐದು ಸ್ಥಾನದಲ್ಲಿವೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 38,717ಕ್ಕೆ ಏರಿಕೆಯಾಗಿದೆ.

ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಮೆರಿಕಾ ಮೊದಲ ಸ್ಥಾನದಲ್ಲಿದ್ದು, ಸೋಂಕಿತರ ಸಂಖ್ಯೆ 74,97,847 ಏರಿಕೆಯಾಗಿದೆ. ಅಮೆರಿಕದಲ್ಲಿ 43,34,605 ಸಕ್ರಿಯ ಪ್ರಕರಣಗಳಿದ್ದು, 2,10,852 ಜನ ಸಾವನ್ನಪ್ಪಿದ್ದಾರೆ. ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಸಿದ್ಧವಾಗಲಿದೆ ಎಂದು ಮಂಗಳವಾರ ವಿಶ್ವಸಂಸ್ಥೆ ಹೇಳಿದೆ.

Share This Article
Leave a Comment

Leave a Reply

Your email address will not be published. Required fields are marked *