ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಟೆಂಟ್ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ

Public TV
1 Min Read

ಹಾವೇರಿ: ಕೊರೊನಾದಿಂದಾಗಿ ಜಿಲ್ಲೆಯ ಕೆಲ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಲಾಕ್‍ಡೌನ್‍ನಿಂದಾಗಿ ಯಾವುದೇ ಕೆಲಸವಿಲ್ಲದೆ ಕೂಲಿ ಕಾರ್ಮಿಕರು ಹಾಗೂ ಟೆಂಟ್ ನಿವಾಸಿಗಳು ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಮನಗಂಡು ಹಾನಗಲ್‍ನ ನವನಗರದಲ್ಲಿರುವ 40 ಟೆಂಟ್ ನಿವಾಸಿಗಳಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ವಿತರಣೆ ಮಾಡಲಾಯಿತು.

ಹಾನಗಲ್ ನಗರದ ಪುರಸಭೆ ಶುದ್ಧ ನೀರಿನ ಘಟಕದ ಪಕ್ಕದಲ್ಲಿ ಟೆಂಟ್‍ಗಳನ್ನ ಹಾಕಿಕೊಂಡು ವಾಸವಾಗಿರುವ 40 ಬಡ ಕುಟುಂಬಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ನೇತೃತ್ವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಲಾಕ್‍ಡೌನ್ ಜಾರಿಗೆ ತಂದಿರುವುದರಿಂದ ದುಡಿದು ಜೀವನ ನಡೆಸುವವರಿಗೆ, ಸಣ್ಣಪುಟ್ಟ ವ್ಯಾಪಾರ ಮಾಡುವ ಸಂಚಾರಿ ವ್ಯಾಪಾರಿಗಳಿಗೆ, ಕಲೆ ಕಸುಬುದಾರರಿಗೆ, ಕಡು ಬಡವರಿಗೆ ಜೀವನ ನಿರ್ವಹಣೆಯೇ ಕಷ್ಟವಾಗಿರುವುದನ್ನು ತಿಳಿದ ಗ್ರಾಮಾಭಿವೃದ್ಧಿ ಸಂಸ್ಥೆ ದಿನಸಿ ಕಿಟ್‍ಗಳನ್ನು ವಿತರಿಸುವ ಮೂಲಕ ಸಹಾಯಕ್ಕೆ ಮುಂದಾಗಿದೆ.

ಅಗತ್ಯ ದಿನಸಿ ವಿತರಣಾ ಕಾರ್ಯಕ್ರಮದಲ್ಲಿ ಹಾನಗಲ್ ಪಿ.ಎಸ್.ಐ ಶ್ರೀಶೈಲ ಪಟ್ಟಣಶೆಟ್ಟಿ, ತಾಲೂಕು ಯೋಜನಾಧಿಕಾರಿಗಳಾದ ರಾಘವೇಂದ್ರ ಪಟ್ಗಾರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *