ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ

Public TV
2 Min Read

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇತ್ತ ನಿನ್ನೆಯಷ್ಟೇ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‍ಬರ್ಗ್ ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಖ್ಯಾತ ಪಾಪ್ ಗಾಯಕಿ ರಿಹಾನಾ ಟ್ವೀಟ್ ಮಾಡಿ, ರೈತ ಹೋರಾಟ ಬೆಂಬಲಿಸಿ ಏಕೆ ಮಾತಾಡ್ತಿಲ್ಲ ಅಂತ ಪ್ರಶ್ನಿಸಿದ್ದರು. ಇದಕ್ಕೆ ಬಾಲಿವುಡ್ ನಟಿ ಕಂಗನಾ ರಣಾವತ್ ತಿರುಗೇಟು ನೀಡಿದ್ದರು. ಪ್ರತಿಭಟನೆ ನಡೆಸ್ತಿರುವವರು ರೈತರಲ್ಲ. ಅವರು ದೇಶವನ್ನು ವಿಭಜಿಸಲು ನೋಡ್ತಿರುವ ಭಯೋತ್ಪಾದಕರು. ದೇಶವನ್ನು ತುಕ್ಡೆ ತುಕ್ಡೆ ಮಾಡಿ ಚೈನಾ ಕಾಲೋನಿಗಳನ್ನಾಗಿ ಮಾಡುವ ಉದ್ದೇಶ ಹೊಂದಿರುವವರು. ನಾವು ನಮ್ಮ ದೇಶವನ್ನು ಮಾರಿಕೊಳ್ಳಲು ನೋಡ್ತಿಲ್ಲ. ಅದಕ್ಕೆ ನಾವು ಮಾತಾಡ್ತಿಲ್ಲ. ನೀವು ಸುಮ್ಮನಿರಿ ಎಂದು ಟ್ವೀಟ್ ಮಾಡಿ ಆಕ್ರೊಶ ಹೊರಹಾಕಿದ್ದರು. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ಭಾರತದ ವಿರುದ್ಧ ಷಡ್ಯಂತ್ರ? – ಪ್ರತಿಭಟನೆಯ ಟೂಲ್‌ ಕಿಟ್ ಬಹಿರಂಗ ಮಾಡಿದ‌ ಗ್ರೇಟಾ ಥನ್‌ಬರ್ಗ್‌

ಒಟ್ಟಿನಲ್ಲಿ ರೈತ ಚಳುವಳಿಯ ಹೆಸರಿನಲ್ಲಿ ಭಾರತದ ಆಂತರಿಕ ವಿಚಾರದಲ್ಲಿ ತಲೆ ಹಾಕಿದ ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ದೇಶಿ ಸೆಲೆಬ್ರಿಟಿಗಳು ಸಿಡಿದೆದ್ದಿದ್ದರು. ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅಜಯ್ ದೇವಗನ್, ಸುನೀಲ್ ಶೆಟ್ಟಿ, ನಿರ್ಮಾಪಕ ಕರಣ್ ಜೋಹರ್, ಗಾಯಕ್ ಕೈಲಾಶ್ ಖೇರ್, ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರ ಶಿಖರ್ ಧವನ್, ಸುರೇಶ್ ರೈನಾ ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎನ್ನುತ್ತಾ #IndiaAgainstPropaganda #IndiaTogether ಟ್ರೆಂಡ್ ಮಾಡಿದ್ದರು. ಇದನ್ನೂ ಓದಿ: #IndiaAgainstPropaganda -ರಾಷ್ಟ್ರಕ್ಕಾಗಿ ನಾವೆಲ್ಲ ಒಂದಾಗೋಣ ಎಂದ ಸಚಿನ್‌

Share This Article
Leave a Comment

Leave a Reply

Your email address will not be published. Required fields are marked *