ನನ್ನ ಜಗತ್ತನ್ನ ಒಂದೇ ಫ್ರೇಮ್‍ನಲ್ಲಿ ನೋಡ್ತಿದ್ದೇನೆ: ವಿರಾಟ್ ಕೊಹ್ಲಿ

Public TV
2 Min Read

ಮುಂಬೈ: ವಿರುಷ್ಕಾ ದಂಪತಿ ಮಗುವಿನ ನಿರೀಕ್ಷೆಯಲ್ಲಿರುವುದು ತಿಳಿದೇ ಇದೆ. ಅನುಷ್ಕಾ ಗರ್ಭಿಣಿಯಾಗಿರುವ ಈ ಹಿಂದೆ ಜೋಡಿ ಮಾಹಿತಿ ನೀಡಿತ್ತು. ಇದೀಗ ಮತ್ತೊಂದು ಫೋಟೋವನ್ನು ನಟಿ ಅನುಷ್ಕಾ ಶರ್ಮಾ ಹಂಚಿಕೊಂಡಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಸಹ ಕಮೆಂಟ್ ಮಾಡಿದ್ದಾರೆ.

ಇನ್‍ಸ್ಟಾಗ್ರಾಮ್‍ನಲ್ಲಿ ನಟಿ ಅನುಷ್ಕಾ ಶರ್ಮಾ ಫೋಟೋ ಪೋಸ್ಟ್ ಮಾಡಿದ್ದು, ಇದಕ್ಕೆ ಭಾವನಾತ್ಮಕ ಸಾಲುಗಳನ್ನು ಸಹ ಬರೆದಿದ್ದಾರೆ. ಜೀವನ ಸೃಷ್ಟಿಯನ್ನು ಅನುಭವಿಸುವುದಕ್ಕಿಂತ ಹೆಚ್ಚು ನೈಜ ಮತ್ತು ವಿನಮ್ರತೆ ಇನ್ನೊಂದಿಲ್ಲ. ಇದು ನಿಮ್ಮ ನಿಯಂತ್ರಣದಲ್ಲಿಲ್ಲ, ಹಾಗಾದರೆ ಏನಿದು? ಎಂದು ಬರೆದುಕೊಂಡಿದ್ದಾರೆ. ಈ ಸಾಲುಗಳನ್ನು ಬರೆದು ಪೋಸ್ಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಕಮೆಂಟ್ ಮಾಡಿ ಕಾಳಜಿ ವಹಿಸುವಂತೆ ಸಲಹೆ ನೀಡುತ್ತಿದ್ದಾರೆ.

ಇನ್ನೂ ವಿಶೇಷವೆಂಬಂತೆ ಸ್ವತಃ ಅನುಷ್ಕಾ ಪತಿ, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಮೆಂಟ್ ಮಾಡಿದ್ದು, ನನ್ನ ಇಡೀ ಜಗತ್ತು ಒಂದೇ ಫ್ರೇಮ್‍ನಲ್ಲಿದೆ ಎಂದು ಹಾರ್ಟ್ ಸಿಂಬಾಲ್ ಹಾಕಿ ಕಮೆಂಟ್ ಮಾಡಿದ್ದಾರೆ. ಈ ಕುರಿತು ಸಹ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

View this post on Instagram

 

Nothing is more real & humbling than experiencing creation of life in you . When this is not in your control then really what is ?

A post shared by AnushkaSharma1588 (@anushkasharma) on

ವಿರುಷ್ಕಾ ದಂಪತಿ ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ಆಗಸ್ಟ್ 27ರಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದರು. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದರು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹವಾಗಿದ್ದು, ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದ ಕೊಹ್ಲಿ, ನಾವು ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದರು.

2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ದರು.

Share This Article
Leave a Comment

Leave a Reply

Your email address will not be published. Required fields are marked *