ನವಲೂರದಲ್ಲಿ 100 ಮಂದಿ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ 50 ಟ್ಯಾಬ್ ವಿತರಣೆ

Public TV
1 Min Read

ಧಾರವಾಡ: ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮ ಹಿನ್ನೆಲೆ ಧಾರವಾಡ ಜಿಲ್ಲೆಯ ನವಲೂರ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯ 100 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ 50 ಉಚಿತ ಟ್ಯಾಬ್‍ಗಳನ್ನ ವಿತರಿಸಲಾಯಿತು.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಆನ್ ಲೈನ್ ತರಗತಿಗಳಲ್ಲಿ ಏನನ್ನೂ ಕಲಿಯಲು ಸಾಧ್ಯವಾಗಿಲ್ಲ, ಇದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಮೇಲೂ ಪ್ರಭಾವ ಬೀರಿದ್ದು, ಇಂತಹ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಉಚಿತವಾಗಿ ಟ್ಯಾಬ್‍ಗಳನ್ನ ವಿತರಿಸಿರುವುದು ಮಕ್ಕಳ ಶೈಕ್ಷಣಿಕ ಉನ್ನತಿಗೆ ಸಹಕಾರಿಯಾಗಲಿದೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಟ್ಯಾಬ್ ವಿತರಿಸಿದ ಬಳಿಕ ಧಾರವಾಡ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಶಾಲಾ ಮಕ್ಕಳಿಗೆ ಟ್ಯಾಬ್ ಸಿಕ್ಕಿದ್ದರಿಂದ ಮುಂದಿನ ದಿನಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಪಡೆಯಲು ಸಹಾಯವಾಗಲಿದೆ. ವಿದ್ಯಾರ್ಥಿಗಳು ಪಬ್ಲಿಕ್ ಟಿವಿಯ ಈ ಕಾರ್ಯಕ್ರಮಕ್ಕೆ ಅಭಿನಂದನೆಯನ್ನ ಸಲ್ಲಿಸಿದರು. ಟ್ಯಾಬ್ ವಿರತಣಾ ಕಾರ್ಯಕ್ರಮದಲ್ಲಿ ಧಾರವಾಡ ಡಿಡಿಪಿಐ ಎಂ ಎಲ್ ಹಂಚಾಟೆ, ಧಾರವಾಡ ಶಹರ ಬಿಇಒ ಎ ಎ ಖಾಜಿ, ಶಾಲೆಯ ಎಸ್‍ಡಿಎಂಸಿ ಸದಸ್ಯರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *