ವಿಜಯಪುರ: ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಬೈಕ್ ಕಳ್ಳರನ್ನು ಬಂಧಿಸಿ ಭಾರೀ ಮೊತ್ತದ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಮೌನೇಶ ಬಡಿಗೇರ (28), ನಿಂಗಪ್ಪ ಪೂಜಾರಿ (38), ಮೀರಸಾಬ ಬಳಿಗಾರ್ (29), ಮೆಹಿಬೂಬ್ ಬಳಿಗಾರ (28) ಬಂಧಿತ ನಾಲ್ವರು ಆರೋಪಿಗಳಾಗಿದ್ದು, ಬಂಧಿತರಿಂದ 30 ಲಕ್ಷ ರೂ. ಮೌಲ್ಯದ 50 ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಭಾರೀ ಪ್ರಮಣದಲ್ಲಿ ಬೈಕ್ ಕದಿಯುತ್ತಿದ್ದ ಗ್ಯಾಂಗ್ ಹೆಡೆಮುರಿ ಕಟ್ಟಿದಂತಾಗಿದೆ. ಆರೋಪಿಗಳನ್ನು ಬಂಧಿಸಿದ ಬಳಿಕ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಆರೋಪಿಗಳು ಜಿಲ್ಲೆಯಾದ್ಯಂತ ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದರು. ಕಳ್ಳತನ ಮಾಡಿದ್ದ ಬೈಕ್ ಗಳನ್ನು ಕಡಿಮೆ ಬೆಲೆಯಲ್ಲಿ ಮಾರುತ್ತಿದ್ದರು. ಬೈಕ್ ಮಾರಾಟ ಮಾಡಿ ಬಂದ ಹಣದಿಂದ ಐಶಾರಾಮಿ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನದಿಂದಾಗಿ ಜಿಲ್ಲೆಯ ಜನ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ.