ಪತ್ನಿ ಜೊತೆ ‘ಅಭಿಮನ್ಯು’ ನಿಖಿಲ್ ವರ್ಕೌಟ್ – ವಿಡಿಯೋ ವೈರಲ್

Public TV
1 Min Read

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿದ್ದಾರೆ. ಆಗಾಗ ಪತ್ನಿ ಜೊತೆಗಿನ ಫೋಟೋ ಮತ್ತು ತಾವು ಮಾಡುತ್ತಿರುವ ಕೆಲಸಗಳ ಬಗ್ಗೆ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಇದೀಗ ನಟ ನಿಖಿಲ್ ತಮ್ಮ ಪತ್ನಿ ರೇವತಿ ಜೊತೆ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

ನಟಿ ನಿಖಿಲ್ ಲಾಕ್‍ಡೌನ್ ಸಂದರ್ಭದಲ್ಲಿ ಪತ್ನಿ ಮತ್ತು ಕುಟುಂಬದವರ ಜೊತೆ ಕಾಲಕಳೆಯುತ್ತಿದ್ದಾರೆ. ಜೊತೆಗೆ ಮನೆಯಲ್ಲಿದ್ದರೂ ಜಿಮ್ ಮಾಡುತ್ತಿದ್ದು, ಆಗಾಗ ತಾವು ವರ್ಕೌಟ್ ಮಾಡುತ್ತಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಮೊದಲ ಬಾರಿಗೆ ಪತ್ನಿ ಜೊತೆಗೆ ವರ್ಕೌಟ್ ಮಾಡುತ್ತಿರುವ ಶೇರ್ ಮಾಡಿಕೊಂಡಿದ್ದಾರೆ.

ವಿಡಿಯೋದಲ್ಲಿ ಪತ್ನಿ ರೇವತಿ ಜೊತೆ ವರ್ಕೌಟ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ರೇವತಿ ಅವರು ಸರಿಯಾಗಿ ಕಾಣುತ್ತಿಲ್ಲ. ಅವರ ಪಕ್ಕದಲ್ಲಿಯೇ ನಿಖಿತ್ ವರ್ಕೌಟ್ ಮಾಡುತ್ತಿದ್ದಾರೆ. ಈ ವಿಡಿಯೋವನ್ನು ನಿಖಿಲ್ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

“ನಮಗೆ ಯಾವಾಗಲೂ ತರಬೇತಿ ನೀಡಲು ಜಿಮ್ ಅಗತ್ಯವಿಲ್ಲ. ಆದರೂ ನಮ್ಮ ಮನಸ್ಸಿಗೆ ಸ್ವಲ್ಪ ಪ್ರೇರಣೆ ಬೇಕು. ಹೀಗಾಗಿ ಪ್ರಕೃತಿಯ ಮಧ್ಯದಲ್ಲಿ ನನ್ನ ಸಂಗಾತಿಯೊಂದಿಗೆ ವರ್ಕೌಟ್ ಮಾಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

https://www.instagram.com/p/CCQ7L-GpwbZ/?utm_source=ig_embed

ಇತ್ತೀಚೆಗಷ್ಟೆ ನಿಖಿಲ್ ಕುಮಾರಸ್ವಾಮಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಅನ್ನದಾತರ ಬಗ್ಗೆ ಬರೆದುಕೊಂಡಿದ್ದರು. “ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ ವಿದ್ಯಾಭ್ಯಾಸದ ಆಧಾರದ ಮೇಲೆ ನಗರಗಳಲ್ಲಿ ಕೆಲಸವೊಂದನ್ನು ಸಂಪಾದಿಸಿ ಜೀವನ ನಡೆಸುವವರು ಒಂದು ಕಡೆಯಾದರೆ, ಕೆಲವರು ಸ್ವಂತ ಉದ್ಯೋಗ ಅಥವಾ ಕೂಲಿ ಕೆಲಸವನ್ನಾದರೂ ನಗರದಲ್ಲಿ ಮಾಡಿಕೊಂಡು ಜೀವನ ನಡೆಸಲು ನಗರಗಳ ಕಡೆಗೆ ಮುಖಮಾಡುವವರು ಇನ್ನೊಂದು ಕಡೆ. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿರುವ ಕೃಷಿಭೂಮಿಗಳು ಪಾಲು ಬೀಳುತ್ತಿವೆ. ನಗರದಲ್ಲಿ ವೃತ್ತಿ ಸ್ಪರ್ಧೆ ತಾರಕಕ್ಕೇರಿದೆ” ಎಂದು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *