ಬೆಂಗಳೂರು: ಪದ್ಮನಾಭ ನಗರದ ಜೆಡಿಎಸ್ ಅಧ್ಯಕ್ಷ, ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ವಿ.ಕೆ. ಗೋಪಾಲ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರಾದ ಶ್ರೀ ವಿ.ಕೆ. ಗೋಪಾಲ್ ಅವರು ನಿಧನರಾದ ಸುದ್ದಿ ತಿಳಿದು ನನಗೆ ತೀವ್ರ ನೋವುಂಟಾಗಿದೆ. ಇದು ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/QxVdqUkCjs
— H D Devegowda (@H_D_Devegowda) June 7, 2021
ವಿ.ಕೆ ಗೋಪಲ್ ಅವರಿಗೆ 56 ವರ್ಷ ವಯಸ್ಸಾಗಿತ್ತು. ಪುತ್ರ, ಪುತ್ರಿ ಸೇರಿ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಮೂಲತಃ ಗುತ್ತಿಗೆದಾರರಾಗಿದ್ದ ಅವರು, ಬಿಡಿಎ ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದ ವಿ.ಕೆ. ಗೋಪಾಲ್ ಕಮ್ಮವಾರಿ ಸಂಘದಲ್ಲಿ ಆಂತರಿಕ ಲೆಕ್ಕ ಪರಿಶೋಧಕರಾಗಿದ್ದರು. ಸಂಘದ ಚಟುವಟಿಕೆಯಲ್ಲೂ ಸಕ್ರಿಯವಾಗಿದ್ದರು.
ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಪದ್ಮನಾಭನಗರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕೋವಿಡ್ ಸಂಕಷ್ಟ ಸಂದರ್ಭದಲ್ಲೂ ಅವರು ಜನ ಸಾಮಾನ್ಯರ ಸಮಸ್ಯೆಗಳಿಗೆ ಸಕ್ರಿಯವಾಗಿ ಸಾಕಷ್ಟು ಸ್ಪಂದಿಸಿದ್ದರು. ಇದನ್ನೂ ಓದಿ: ಮಾಜಿ ಸಚಿವ ಪ್ರೊ. ಮಮ್ತಾಜ್ ಅಲಿ ಖಾನ್ ನಿಧನ : ಗಣ್ಯರಿಂದ ಸಂತಾಪ
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ವಿ.ಕೆ ಗೋಪಾಲ್ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ನನಗೆ ತೀವ್ರ ದುಃಖವಾಗಿದೆ, ಜೆಡಿಎಸ್ಗೆ ನಷ್ಟ ಉಂಟಾಗಿದೆ. ಪದ್ಮನಾಭನಗರದಲ್ಲಿ ಜೆಡಿಎಸ್ ಅನ್ನು ಸಮರ್ಥವಾಗಿ ಕಟ್ಟುವಲ್ಲಿ ಗೋಪಾಲ್ ಅವರ ಶ್ರಮ ದೊಡ್ಡದು. ಅವರ ಆತ್ಮಕ್ಕೆ ಶಾಂತಿ ಸಿಗಲಿ. pic.twitter.com/YzewP06Ern
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021
ಮಾಜಿ ಪ್ರಧಾನಿ, ಜೆಡಿಎಸ್ ವರಷ್ಠ ಹೆಚ್ ಡಿ ದೇವಗೌಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಚಿವ ಆರ್ ಅಶೋಕ್ ಸೇರಿದಂತೆ ಇತರರು ವಿ ಕೆ ಗೋಪಾಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಆರ್ ಅಶೋಕ್ ಅವರು ಅಂತಿಮ ದರ್ಶನ ಪಡೆದು ಮೃತರ ಕುಟುಂಬಕ್ಕೆ ಸ್ವಾಂತನ ಹೇಳಿ ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಸಿದ್ದಾರೆ. ಅಂತ್ಯಸಂಸ್ಕಾರ ಇಂದು ಸಂಜೆ ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ.