ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ

Public TV
2 Min Read

ಬೆಳಗಾವಿ: ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್ ನಿರ್ವಹಣಾ ಕುರಿತಂತೆ ಸಭೆ ನಡೆಸಲು ಇಂದು ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ. ಇನ್ನು ಒಂದೂವರೆ ಎರಡು ತಿಂಗಳ ನಂತರ ವಾತಾವರಣದಲ್ಲಿ ಸುಧಾರಣೆ ಕಂಡು ಬಂದರೆ ಒಂದು ದಿನ ಅಥವಾ ಎರಡು ದಿನದಲ್ಲಿ ಪರೀಕ್ಷೆ ನಡೆಸಬೇಕೆಂದು ತೀರ್ಮಾನಿಸಿದ್ದಾರೆ. ಹಾಗಾಗಿ ಈ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸುತ್ತೇವೆ. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ನಾನು ಬೆಂಗಳೂರಿಗೆ ಹೋಗಿ ಸುರೇಶ್ ಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಬೆಳಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‍ರವರು, ಕೋವಿಡ್ ಸಾಂಕ್ರಾಮಿಕ ನ್ನೆಲೆ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸೂಕ್ತ ದಿನಾಂಕ ನಿಗದಿ ಪಡಿಸಿ ಎರಡು ದಿನ ಸರಳೀಕರಣವಾಗಿ ಪರೀಕ್ಷೆ ನಡೆಸುವುದಾಗಿ ಘೋಷಿಸಿದ್ದಾರೆ. ಇದನ್ನು ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

ಕೋವಿಡ್-19ರ ಪರಿಸ್ಥಿತಿಯಲ್ಲಿ 06 ವಿಷಯಗಳಿಗೆ ಸುದೀರ್ಘ ಅವಧಿಗೆ ಪರೀಕ್ಷೆಗಳನ್ನು ನಡೆಸಿದಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 06 ದಿನಗಳು ಬರುವುದು ಕಷ್ಟಸಾಧ್ಯವಾಗಿರುತ್ತದೆ. ಹೀಗಾಗಿ ಎಸ್‍ಎಸ್‍ಎಲ್‍ಸಿಯಲ್ಲಿ ಮುಖ್ಯ ವಿಷಯಗಳಾದ ಭಾಗ- 1 ಗಣಿತ, ಭಾಗ- 2 ವಿಜ್ಞಾನ ಮತ್ತು ಭಾಗ- 3 ಸಮಾಜ ವಿಜ್ಞಾನ ಪರೀಕ್ಷೆಯನ್ನು ನೀಡಲಾಗುತ್ತದೆ. ಪರೀಕ್ಷಾ ಸಮಯವನ್ನು ಬೆಳಿಗ್ಗೆ 10:30 ರಿಂದ 01:30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುವುದಾಗಿ ಹೇಳಿದ್ದಾರೆ.

ಒಟ್ಟು 03 ಭಾಷಾ ವಿಷಯಗಳಾದ ಭಾಗ -1 ಪ್ರಥಮ ಭಾಷೆ, ಭಾಗ- 2 ದ್ವಿತೀಯ ಭಾಷೆ ಮತ್ತು ಭಾಗ -3ರಲ್ಲಿ ತೃತೀಯ ಭಾಷೆ ಪರೀಕ್ಷೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಅಪರಾಹ್ನ 10:30 ರಿಂದ 01:30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುವುದಾಗಿ ತಿಳಿಸಿದ್ದಾರೆ. ಇದನ್ನು ಓದಿ:ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Share This Article
Leave a Comment

Leave a Reply

Your email address will not be published. Required fields are marked *