ಪೊಲೀಸರು ಕ್ವಾರಂಟೈನ್‍ನಲ್ಲಿದ್ರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣನೆ: ಪ್ರವೀಣ್ ಸೂದ್ ಆದೇಶ

Public TV
1 Min Read

ಬೆಂಗಳೂರು: ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇನ್ಮುಂದೆ ಪೊಲೀಸರು ಕ್ವಾರಂಟೈನ್‍ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಿ ಅಂತ ಡಿಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಹಲವಾರು ಪೊಲೀಸರು ಸೋಂಕಿತರ ಜೊತೆ ಸಂಪರ್ಕ ಹೊಂದಿ ಕ್ವಾರಂಟೈನ್ ಆಗುತ್ತಿದ್ದಾರೆ. ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಅದರಿಂದ ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಇರಬೇಕು. ಆದ್ದರಿಂದ ಕ್ವಾರಂಟೈನ್ ಅವಧಿಯನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸುವಂತೆ ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಮಾಹಾಮಾರಿ ಕೊರೊನಾ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಪ್ರತಿನಿತ್ಯ ಪೊಲೀಸರು ಸಾರ್ವಜನಿಕರ ಜೊತೆ ನೇರ ಸಂಪರ್ಕದಲ್ಲಿರುತ್ತಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚು. ಈಗಾಗಲೇ ಪೊಲೀಸ್ ಸಿಬ್ಬಂದಿಗೂ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೇ ಸೋಂಕಿತರ ಜೊತೆ ಕರ್ತವ್ಯ ನಿರ್ವಹಿಸಿದ್ದ ಹಲವು ಸಿಬ್ಬಂದಿ ಕ್ವಾರಂಟೈನ್ ಆಗಿದ್ದಾರೆ. ಹೀಗಾಗಿ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂದರು.

ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಇದು ಅನ್ವಯವಾಗುತ್ತದೆ ಎಂದು ಪ್ರವೀಣ್ ಸೂದ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *