ಬಳ್ಳಾರಿ: ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ (ರೋಗಿ ನಂಬರ್ 1185) ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಬಳ್ಳಾರಿಯ ಕೋಟೆ ನಗರದ 60 ವರ್ಷದ ನಿವಾಸಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಜ್ವರ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಂಜಾಗ್ರತ ಕ್ರಮವಾಗಿ ಕೋವಿಡ್ ಟೆಸ್ಟ್ ಮಾಡಲಾಗಿತ್ತು.
ಮೇ 15ರಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಹಾಗಾಗಿ ಸೋಂಕಿತನನ್ನು ಕೋವಿಡ್-19 ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.