ಬಸ್ಸಿಗೆ ಜೆಸಿಬಿ ಡಿಕ್ಕಿಯಾಗಿ 17 ಮಂದಿ ದಾರುಣ ಸಾವು- 24 ಮಂದಿಗೆ ಗಾಯ

Public TV
1 Min Read

– ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ಲಕ್ನೋ: ಬಸ್ಸಿಗೆ ಜೆಸಿಬಿ ಡಿಕ್ಕಿಯಾಗಿ ಸುಮಾರು 17 ಮಂದಿ ದಾರುಣವಾಗಿ ಮೃತಪಟ್ಟು, 24 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಈ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಿಂದ ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಕಾನ್ಪುರದ ಸಚೇಂದಿ ಬಳಿಯ ಕಿಸಾನ್ ನಗರ ಕಾಲುವೆ ಸಮೀಪ ಜೆಸಿಬಿ ಶತಾಬ್ದಿ ಎಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 17 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಕಾನ್ಪುರದಿಂದ ಅಹಮದಾಬಾದ್ ಕಡೆ ಚಲಿಸುತ್ತಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮೋದಿ, ಯೋಗಿ ಆದಿತ್ಯನಾಥ್ ಪರಿಹಾರ:
ದುರಂತದಲ್ಲಿ ಮಡಿದ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇತ್ತ ಗೃಹ ಸಚಿವ ಅಮಿತ್ ಶಾ ಅವರು ಟ್ವಿಟ್ಟರ್ ನಲ್ಲಿ ಬರೆದುಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸಹಾಯ ಮಾಡುವಂತೆ ಸೂಚಿಸಿದ್ದರು. ಅಪಘಾತಕ್ಕೆ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *