ಬೆಂಗಳೂರು: ರಾಜಧಾನಿಯಲ್ಲಿ ದಿನೇ ದಿನೇ ಕೊರೊನಾ ಸ್ಫೋಟವಾಗುತ್ತಿರು ಹಿನ್ನೆಲೆಯಲ್ಲಿ ಒಂದು ವಾರ ಲಾಕ್‍ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಆಗುವ ಸಾಧ್ಯತೆಗಳಿವೆ.
ಕಳೆದ ಒಂದು ವಾರದಿಂದ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳ ಬೆಳಕಿಗೆ ಬರುತ್ತಿವೆ. ಕೊರೊನಾ ಕಂಟ್ರೋಲ್ ಗಾಗಿ ತಜ್ಞರ ಸಲಹೆಯ ಮೇರೆಗೆ ಒಂದು ವಾರದವರೆಗೆ ಲಾಕ್‍ಡೌನ್ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಬುಧವಾರದಿಂದ ಲಾಕ್‍ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆಯಂತೆ. ಇಂದು ರಾತ್ರಿ 8 ಗಂಟೆಯಿಂದಲೇ ಭಾನುವಾರದ ಲಾಕ್‍ಡೌನ್ ಆರಂಭವಾಗಲಿದೆ. ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ಇಡೀ ರಾಜ್ಯದಲ್ಲಿ ಸಂಡೇ ಲಾಕ್‍ಡೌನ್ ಜಾರಿಯಲ್ಲಿರಲಿದೆ.