ಬೈಕ್ ಕಳವು ಮಾಡ್ತಿದ್ದಾತನ ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು!

Public TV
1 Min Read

ಗದಗ: ಬೈಕ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗದಗ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ.

ಕಳ್ಳನನ್ನು ಕುಮಾರ ನರ್ತಿ ಎಂದು ಗುರುತಿಸಲಾಗಿದ್ದು, ಈತ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಇದೀಗ ಸ್ಥಳೀಯರು ಕಳ್ಳನ ಹಿಡಿದು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಶರಣು ಪಾಟೀಲ್ ಎಂಬವರ ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಕುಮಾರ ಸಿಕ್ಕಿ ಬಿದ್ದಿದ್ದಾನೆ. ಈತ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಮಾತ್ರವಲ್ಲದೆ ಪೆಟ್ರೋಲ್ ಕೂಡ ಕಳ್ಳತನ ಮಾಡುತ್ತಿದ್ದ. ಸಾರ್ವಜನಿಕರು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗದಗಿನ ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *